ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪತ್ನಿಯಿಂದಲೇ ಪತಿ ಬರ್ಬರ ಹತ್ಯೆಗೈದ ಪ್ರಕರಣವೊಂದು ನಡೆದಿದೆ.
ಉಮೇಶ್ ದಾಮಿ (27) ಕೊಲೆಯಾದ ಪತಿಯಾಗಿದ್ದು, ಈತನನ್ನು ಪತ್ನಿ ಮನಿಷಾ ದಾಮಿ ಕೊಲೆ ಮಾಡಿದ್ದಾಳೆ. ಈ ಘಟನೆ ಹುಳಿಮಾವು (Hulimavu) ಸಮೀಪದ ಕಾಲೇಜಿನಲ್ಲಿ ನಡೆದಿದೆ.
Advertisement
ಈ ದಂಪತಿ ಕಾಲೇಜೊಂದರಲ್ಲಿ ಸೆಕ್ಯುರಿಟಿ ಹಾಗೂ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಘಟನೆ ನಡೆದಂದು ಉಮೇಶ್ ರಾತ್ರಿ ಗೆಳೆಯನೊಂದಿಗೆ ಎಣ್ಣೆ ಪಾರ್ಟಿಗೆ ಹೋಗಿದ್ದ. ಪಾರ್ಟಿ ಮುಗಿಸಿಕೊಂಡು ರಾತ್ರಿ 12 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗಿದ್ದ. ಆ ವೇಳೆ ಮನಿಷಾ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಕೋಪಗೊಂಡ ಉಮೇಶ್ ಆಕೆಯ ಜೊತೆಗೆ ಜಗಳವಾಡಿದ್ದಾನೆ. ಇದನ್ನೂ ಓದಿ: ಲಾರಿ, ಜೀಪ್ ಡಿಕ್ಕಿ- ಸ್ಥಳದಲ್ಲೇ ನಾಲ್ವರ ದುರ್ಮರಣ
Advertisement
Advertisement
ಅನೈತಿಕ ಸಂಬಂಧ ಹೊಂದಿರೋ ಬಗ್ಗೆ ಅನುಮಾನದಿಂದ ಪತ್ನಿ ಜೊತೆ ಗಲಾಟೆ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ಹೋದಾಗ ಮನಿಷಾ, ಚಾಕು ತೆಗೆದುಕೊಂಡು ಉಮೇಶ್ ದಾಮಿಗೆ ಇರಿದಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಉಮೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಉಮೇಶ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Advertisement
ಇತ್ತ ಆರೋಪಿ ಮನಿಷಾಳನ್ನ ಬಂಧಿಸಿ ಹುಳಿಮಾವು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಹುಳಿಮಾವು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.