ಬೀದರ್: ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಯದಲಾಪೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂಕುಶರೆಡ್ಡಿ ಬಾಬುರೆಡ್ಡಿ ಟೋಣ್ಣೆನವರ್ (35) ಕೊಲೆಯಾದ ವ್ಯಕ್ತಿ.
ಜಮೀನಿನಲ್ಲಿ ಮರದ ಕೆಳಗೆ ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಹಣಕಾಸಿನ ವಿಷಯಕ್ಕಾಗಿ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಕೊಲೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಲೇಡಿ ಡಾನ್‌ನಿಂದ ಉದ್ಯಮಿ ಮೇಲೆ ಹಲ್ಲೆ
ಸುದ್ದಿ ತಿಳಿದ ಹುಮ್ನಾಬಾದ್ ಎಎಸ್ಪಿ ಶಿವಾಂಸು ರಾಜಪುತ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.