ಕೊಡಲಿಯಿಂದ ಹಲ್ಲೆಗೈದು ಹೊರಹಾಕಿ ಮನೆಯೊಳಗೆ ಮಲಗಿದ- ಬೆಳಗೆದ್ದು ನೋಡಿದಾಗ ಪತ್ನಿ ಸಾವು

Public TV
1 Min Read
CHIKKAMAGALURU

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ.

CHIKKAMAGALURU 1

ಮೃತಳನ್ನ ಪದ್ಮಾಕ್ಷಿ (40) ಎಂದು ಗುರುತಿಸಲಾಗಿದೆ. ಕಿರಗುಂದ ಗ್ರಾಮದ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ-ಪದ್ಮಾಕ್ಷಿ ದಂಪತಿ ಮಧ್ಯೆ ಕುಡಿತ ಹಾಗೂ ಪದ್ಮಾಕ್ಷಿಯ ಅನೈತಿಕ ಸಂಬಂಧದ ಬಗ್ಗೆ ಗಲಾಟೆ ನಡೆಯುತ್ತಲೇ ಇತ್ತು. ಕಳೆದ ರಾತ್ರಿ ಕಂಠ ಪೂರ್ತಿ ಕುಡಿದು ಬಂದ ಪತಿ ಚಂದ್ರ ಪತ್ನಿ ಜೊತೆ ಜಗಳವಾಡಿದ್ದಾನೆ.

ಕುಡಿದ ಮತ್ತಿನಲ್ಲಿ ಅನೈತಿಕ ಸಂಬಂಧವನ್ನ ಶಂಕಿಸಿ ಜಗಳವಾಡಿ ಪತ್ನಿಗೆ ಹೊಡೆದು, ಮನೆಯಲ್ಲಿದ್ದ ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿದ್ದಾನೆ. ಕೊಡಲಿಯಿಂದ ಹಲ್ಲೆಗೈದ ಪತಿ ಆಕೆಯನ್ನ ಮನೆಯಿಂದ ಹೊರತಳ್ಳಿ ಬಾಗಿಲು ಹಾಕಿಕೊಂಡು ಮಲಗಿದ್ದಾನೆ. ಕೊಡಲಿಯಿಂದ ಹಲ್ಲೆಗೈದ ಹಿನ್ನೆಲೆ ತೀವ್ರ ರಕ್ತಸ್ರಾವ ಹಾಗೂ ಇಡೀ ರಾತ್ರಿ ಹೊರಗೆ ಬಿದ್ದಿದ್ದ ಮಹಿಳೆ ಪದ್ಮಾಕ್ಷಿ ಅತಿಯಾದ ಶೀತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ – ದೆಹಲಿಯಲ್ಲಿ ಇಬ್ಬರು ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಹೈಕಮಾಂಡ್ ಉತ್ಸುಕ

ಪತ್ನಿಗೆ ಹೊಡೆದು ಹೊರತಳ್ಳಿ ಮಲಗಿದ್ದ ಪತಿ ಚಂದ್ರ ಬೆಳಗ್ಗೆ ಎದ್ದು ನೋಡಿದಾಗ ಪತ್ನಿ ಸಾವನ್ನಪ್ಪಿದ್ದಳು. ಪತ್ನಿಯ ಶವದ ಮುಂದೆ ಕೂತು ಕಣ್ಣೀರಿಟ್ಟಿದ್ದಾನೆ. ಮೃತಳಿಗೆ 18 ಹಾಗೂ 15 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದು, ಇವರ ಜಗಳದ ವೇಳೆ ಅವರು ಮನೆಯಲ್ಲಿ ಇರಲಿಲ್ಲ. ಬೆಳಗ್ಗೆ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಚಂದ್ರನನ್ನ ಬಂಧಿಸಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Web Stories

Share This Article