CrimeDharwadDistrictsKarnatakaLatestMain Post

ರೈಲಿನೊಳಗಡೆಯೇ ವ್ಯಕ್ತಿಯ ಬರ್ಬರ ಹತ್ಯೆ

ಹುಬ್ಬಳ್ಳಿ: ರೈಲಿನ ಒಳಗಡೆಯೇ ವ್ಯಕ್ತಿಯೊಬ್ಬನನ್ನು ಬರ್ಬರವಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ತಿರುಪತಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿ (Tirupati- Hubballi Passenger Train) ನ ಸಾಮಾನ್ಯ ಬೋಗಿಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ರೈಲು ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಬಳಿ ರೈಲು ಬಂದಾಗ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ರಕ್ತದ ಕಲೆಗಳಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಕಳ್ಳತನ – ಯೂನಿಫಾರ್ಮ್, ಪಿಸ್ತೂಲ್ ಜೊತೆಗೆ ಕಿರಾತಕರು ಜೂಟ್

ಕೂಡಲೇ ಸಿಬ್ಬಂದಿ ರೈಲು ನಿಲ್ಲಿಸಲು ಸೂಚನೆ ನೀಡಿದ್ದಾರೆ. ಅಂತೆಯೇ ಬ್ಯಾಹಟ್ಟಿಯಲ್ಲೇ ರೈಲನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಕೊಲೆಯಾಗಿರುವುದು ಬಯಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆಯಾದ ವ್ಯಕ್ತಿ ಯಾರು..?, ಹತ್ಯೆ ಮಾಡಿದವರು ಯಾರೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button