ಚಂಡೀಗಢ: ಪಾಪಿ ತಂದೆಯೊಬ್ಬ ಮೂರು ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.
ಈಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಅಕ್ಟೋಬರ್ 28 ರಂದು ನಡೆದಿದ್ದು, ಪತ್ನಿ ಜಗಳವಾಡಿಕೊಂಡು ಮನೆಯಿಂದ ಹೋಗಿದ್ದಾಗ ಕುಡಿದ ಮತ್ತಿನಲ್ಲಿ ಈ ರೀತಿ ನೀಚ ಕೃತ್ಯವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ಶಾಮ್ಶೇರ್ ಸಿಂಗ್ ಹೇಳಿದ್ದಾರೆ.
Advertisement
ಆರೋಪಿ ಪತಿ ಜೊತೆಗೆ ಜಗಳವಾಡಿಕೊಂಡು ಪತ್ನಿ ಅಂದು ರಾತ್ರಿ ಒಂದು ವರ್ಷದ ಕಿರಿಯ ಪುತ್ರಿಯನ್ನು ಕರೆದುಕೊಂಡು ಸಂಬಂಧಿ ಮನೆಗೆ ಹೋಗಿದ್ದಾರೆ. ಈ ವೇಳೆ ಮೂರು ವರ್ಷದ ಮಗಳನ್ನು ಪತಿಯ ಬಳಿ ಬಿಟ್ಟು ಹೋಗಿದ್ದಾರೆ. ಆಗ ಕುಡಿದ ಮತ್ತಿನಲ್ಲಿದ್ದ ಆರೋಪಿ ತಂದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಎಚ್ಚರಗೊಂಡು ಅತ್ಯಾಚಾರದ ವಿಚಾರ ತಿಳಿದ ಮನೆಯಿಂದ ಪರಾರಿಯಾಗಿದ್ದಾನೆ ಎಂದು ಸಿಂಗ್ ತಿಳಿಸಿದ್ದಾರೆ.
Advertisement
Advertisement
ಮಾರನೇ ದಿನ ಪತ್ನಿ ಮನೆಗೆ ಬಂದಾಗ ಮಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ. ತಕ್ಷಣ ತಾಯಿ ಆಸ್ಪತ್ರೆಗೆ ಮಗಳನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ಪರೀಕ್ಷೆ ಮಾಡಿದ ವೈದ್ಯರು ಮಗುವಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಸದ್ಯಕ್ಕೆ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಕರೆದುಕೊಂಡು ಹೋಗಿ ಎಂದು ತಿಳಿಸಿದ್ದಾರೆ.
Advertisement
ಇತ್ತ ಪತ್ನಿ ಪೊಲೀಸ್ ಠಾಣೆಗೆ ಹೋಗಿ ಆರೋಪಿ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಶುರುಮಾಡಿ ಅತ್ಯಾಚಾರ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ತಂದೆಯನ್ನು ಬಂಧಿಸಿದ್ದಾರೆ.
Haryana: A man was arrested yesterday for allegedly raping his 3-year-old daughter in Gurugram on the intervening night of 28-29 November. FIR has been registered. pic.twitter.com/5AKsD4H65M
— ANI (@ANI) December 1, 2018
ಸದ್ಯಕ್ಕೆ ಪೊಲೀಸರು ಆರೋಪಿ ತಂದೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv