ಅಮರಾವತಿ: ಮೂರು ವರ್ಷದ ಬಾಲಕಿಗೆ ಬಾಳೆಹಣ್ಣು ಕೊಡಿಸುವ ಆಮಿಷವೊಡ್ಡಿ ಆಕೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ನಡೆದಿದೆ.
ಸಂತ್ರಸ್ತೆಯ ಪೋಷಕರು ಆಕೆಯನ್ನು ಹಳ್ಳಿಯೊಂದರ ಸಂಬಂಧಿಕರ ಮದುವೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ದುರುಳನೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಉಗ್ರರ ದಾಳಿಯಿಂದ 20,000 ಭಾರತೀಯರು ಸಾವು: ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ಕಿಡಿ
ಬಾಲಕಿ ಹೊರಗೆ ಆಟವಾಡುತ್ತಿದ್ದಾಗ, ಆರೋಪಿ ರಹಮತ್-ಉಲ್ಲಾ ಬಾಳೆಹಣ್ಣಿನ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಸಂತ್ರಸ್ತೆಯ ಪೋಷಕರು ಆಕೆಗಾಗಿ ಹುಡುಕಾಡಿದರೂ ಪತ್ತೆಯಾಗಲಿಲ್ಲ. ನಂತರ, ಆಕೆಯ ಶವ ಪೊದೆಯಲ್ಲಿ ಕಂಡುಬಂದಿದೆ. ನಂತರ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್| ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿ ಇಬ್ಬರು ನಕ್ಸಲ್ ನಾಯಕರ ಎನ್‌ಕೌಂಟರ್