ಧಾರವಾಡ: ಬಿರಿಯಾನಿ (Biriyani), ಸಿಗರೇಟ್‌ಗೆ (Cigarette) ಬೇಡಿಕೆಯಿಟ್ಟು ಮೊಬೈಲ್ ಟವರ್ ಏರಿ ಕುಳಿತಿದ್ದ ವ್ಯಕ್ತಿಯನ್ನು ಕೊನೆಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಕ್ಷಣಾ ತಂಡದವರು ಕೆಳಗಿಳಿಸುವಲ್ಲಿ ಯಶಸ್ವಿಯಾದರು.
ಈ ರೀತಿ ಟವರ್ ಏರಿ ಕುಳಿತ ವ್ಯಕ್ತಿ ಧಾರವಾಡ (Dharwad) ಮೂಲದ ಜಾವೇದ್ ಎಂದು ಗೊತ್ತಾಗಿದೆ. ಧಾರವಾಡದ ಜ್ಯುಬಿಲಿ ಸರ್ಕಲ್ ಬಳಿ ಇರುವ ಮೊಬೈಲ್ ಟವರ್‌ನ್ನು ಈತ ಏರಿ ಕುಳಿತಿದ್ದ. ಇದನ್ನೂ ಓದಿ: ದುರಹಂಕಾರಕ್ಕೆ ನಾನು ಅವನ ಹಿಂದೆ ಹೋಗಿದ್ದೆ: ಗಾಯಾಳು
Advertisement
Advertisement
ಈತ ಪಿಕ್ ಪಾಕೆಟರ್ ಎಂದು ಗೊತ್ತಾಗಿದ್ದು, ಹಲವು ಕಡೆ ಪಿಕ್ ಪಾಕೆಟ್ ಮಾಡಿದ್ದ. ಅಲ್ಲದೇ ಈತನ ಮೇಲೆ ಅರೆಸ್ಟ್ ವಾರೆಂಟ್ ಸಹ ಇದೆ. ಜಿಲ್ಲಾ ನ್ಯಾಯಾಧೀಶರು ಸ್ಥಳಕ್ಕೆ ಬರುವವರೆಗೂ ನಾನು ಟವರ್ ಬಿಟ್ಟು ಇಳಿದು ಬರುವುದಿಲ್ಲ ಎಂದು ಪಟ್ಟು ಹಿಡಿದು ಅಲ್ಲೇ ಕುಳಿತಿದ್ದ.
Advertisement
ಆತನ ರಕ್ಷಣೆಗೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರೂ ಮುಂದಾಗಿದ್ದರು. ರಕ್ಷಣಾ ತಂಡದ ಇಬ್ಬರು ಸಿಬ್ಬಂದಿ ಟವರ್ ಏರಿ ಆತನಿಗೆ ನೀರು ಹಾಗೂ ಬಿರಿಯಾನಿ ಕೊಟ್ಟು ಕೆಳಗಿಳಿಯುವಂತೆ ಸೂಚನೆ ನೀಡಿದ್ದರು. ಆದರೆ ಆ ವ್ಯಕ್ತಿ ಊಟ ಕೆಳಗೆ ಎಸೆದು ಕೇವಲ ನೀರು ಮಾತ್ರ ಕುಡಿದು ಕೆಳಗೆ ಇಳಿದು ಬರುವುದಿಲ್ಲ ಎಂದು ಹುಚ್ಚಾಟ ನಡೆಸಿದ್ದ. ಅಲ್ಲದೇ ತನಗೆ ಸಿಗರೇಟ್ ಕೊಡುವಂತೆ ಬೇಡಿಕೆಯನ್ನೂ ಇಟ್ಟಿದ್ದ. ಇದನ್ನೂ ಓದಿ: ಮರಕ್ಕೆ ನೇಣು ಹಾಕಿಕೊಳ್ಳುವಾಗ ಪಂಚೆ ಹರಿದು, ಕೆಳಗೆ ಬಿದ್ದು ಯುವಕ ಸಾವು
Advertisement
ಸತತ ಮೂರು ಗಂಟೆಗಳ ಬಳಿಕ ರಕ್ಷಣಾ ತಂಡದ ಸಿಬ್ಬಂದಿ ಆತನ ಮನವೊಲಿಸಿ ಸುರಕ್ಷಿತವಾಗಿ ಕೆಳಗಿಳಿಸಿ, ಆತನನ್ನು ಉಪನಗರ ಠಾಣೆ ಪೊಲೀಸ್ ವಶಕ್ಕೆ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k