CrimeLatestLeading NewsMain PostNational

ತನ್ನ ಹೆಂಡತಿಯನ್ನ ಭಾರೀ ಮೊತ್ತಕ್ಕೆ ಮಾರಾಟ ಮಾಡಿದ ಗಂಡ – ಮದುವೆನೂ ಮಾಡಿಸಿದ

ಭುವನೇಶ್ವರ್: ದೆಹಲಿ (NewDelhi) ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಭಾರೀ ಮೊತ್ತಕ್ಕೆ ಮಾರಾಟ ಮಾಡಿರುವ ಆತಂಕಕಾರಿ ಘಟನೆ ಒಡಿಶಾದ (Odisha) ಕಲಹಂಡಿ ಜಿಲ್ಲೆಯಲ್ಲಿ ನಡೆದಿದೆ.

ಪತ್ನಿಯನ್ನು ಮತ್ತೊಬ್ಬ ವ್ಯಕ್ತಿಗೆ ಮಾರಾಟ ಮಾಡಿದ ಬಳಿಕ ಬಲವಂತವಾಗಿ ಮದುವೆಯನ್ನೂ (Marriage) ಮಾಡಿಸಿದ್ದಾನೆ. ಇದನ್ನೂ ಓದಿ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ – ಖಾಸಗಿ ವಾಹನದಲ್ಲಿ EVM ಸಾಗಾಟ: ಕಾಂಗ್ರೆಸ್ ದೂರು

ಖೀರಾ ಬೆರುಕ್ ಎಂಬಾತ ತನ್ನ ಪತ್ನಿ ಪೂರ್ಣಿಮಾ ಭೋಯ್ ಜೊತೆ ಕೆಲಸಕ್ಕೆಂದು ಅಕ್ಟೋಬರ್ 30 ರಂದು ದೆಹಲಿಗೆ ಹೊರಟಿದ್ದನು. ದೆಹಲಿಗೆ ಹೋದ ಎರಡೇ ದಿನಗಳಲ್ಲಿ ಹಣಕ್ಕಾಗಿ ತನ್ನ ಪತ್ನಿಯನ್ನು ಮತ್ತೊಬ್ಬ ವ್ಯಕ್ತಿಗೆ ಮಾರಾಟ ಮಾಡಿದ್ದಾನೆ. ಭಾರೀ ಮೊತ್ತದ ಹಣ ಪಡೆದ ಬಳಿಕ ಪತ್ನಿಯನ್ನು ಆತನೊಂದಿಗೆ ಮದುವೆ ಸಹ ಮಾಡಿಸಿದ್ದಾನೆ. ಇದನ್ನೂ ಓದಿ: ಇಸ್ಲಾಮಿಕ್ ಶಿಕ್ಷಣ ಕೇಂದ್ರದಲ್ಲಿ ಸಂಸ್ಕೃತ, ಉಪನಿಷತ್ ಕಲಿಕೆ- ಕೇಂದ್ರದ ನಡೆಗೆ ನೆಟ್ಟಿಗರ ಮೆಚ್ಚುಗೆ

ನವೆಂಬರ್ 6ರಂದು ತನ್ನ ತಂದೆ ಕುಲಮಣಿ ಭೋಯ್‌ಗೆ ಕರೆ ಮಾಡಿದ ಪೂರ್ಣಿಮಾ ಭೋಯ್, ತನ್ನ ಗಂಡನ ಕೃತ್ಯವನ್ನು ಹೇಳಿದ್ದಾಳೆ. ಮಗಳ ಕಷ್ಟ ಕೇಳಿದ ತಂದೆ ತಕ್ಷಣ ಬೆರುಕ್ ವಿರುದ್ಧ ನಾರ್ಲಾ ಪೊಲೀಸ್ ಠಾಣೆಯಲ್ಲಿ (Narla Police Station) ದೂರು ನೀಡಿದ್ದಾರೆ. ನಂತರ ಪ್ರಕರಣ (FIR) ದಾಖಲಿಸಿಕೊಂಡಿದ್ದ ನಾರ್ಲಾ ಪೊಲೀಸರು ಬೆರುಕ್‌ನನ್ನು ಬಂಧಿಸಿ, ನ್ಯಾಯಾಲಯದ (Court) ಮುಂದೆ ಹಾಜರುಪಡಿಸಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button