ಮಡಿಕೇರಿ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ ವ್ಯಕ್ತಿಯೊಬ್ಬನಿಗೆ ಮಡಿಕೇರಿ ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ (Kodagu District and Sessions court) ದಂಡ ಸಹಿತ 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಪೊಲೀಸ್ ಠಾಣಾ (Suntikoppa Police Station) ವ್ಯಾಪ್ತಿಯ ಹರದೂರು ಗ್ರಾಮದ ಎಸ್ಟೇಟ್‌ವೊಂದರ ಲೈನ್ ಮನೆಯಲ್ಲಿ ವಾಸವಿದ್ದ ಎಂ.ವಿ ರಮೇಶ ಎಂಬಾತನೆ ಶಿಕ್ಷೆಗೆ ಗುರಿಯಾಗಿರುವ ಕಾಮುಕ. ಇದನ್ನೂ ಓದಿ: ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರದಿಂದ ಸಮ್ಮತಿ
Advertisement
Advertisement
2021ರ ಆಗಸ್ಟ್ 5 ರಂದು ರಮೇಶ್ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಬಾಲಕಿಯ ಪೋಷಕರು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೋಕ್ಸೋ ಕಾಯ್ಡೆ ಅಡಿ ಪ್ರಕರಣ (Pocso Case) ದಾಖಲಿಸಿಕೊಂಡಿದ್ದ ಪೊಲೀಸರು ಆ.7ರಂದು (ಪ್ರಕರಣ ನಡೆದ ಎರಡು ದಿನಗಳ ನಂತರ) ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಇದನ್ನೂ ಓದಿ: ಮಾರುತಿ ಸುಜುಕಿಯ ಮೊದಲ ಎಲೆಕ್ಟ್ರಿಕ್ ಕಾರ್ ಇ ವಿಟಾರಾ ಅನಾವರಣ; 500 ಕಿಮೀ ರೇಂಜ್
Advertisement
Advertisement
ಪ್ರಕರಣದ ತನಿಖಾಧಿಕಾರಿ ಕುಶಾಲನಗರ ವೃತ್ತದ ಸಿಪಿಐ ಎಂ. ಮಹೇಶ್ ಹಾಗೂ ತನಿಖಾ ಸಹಾಯಕ ಹೆಚ್.ಎಸ್ ಲೋಕೇಶ್ ಅವರು 2021ರ ಸೆಪ್ಟಂಬರ್ 16 ರಂದು ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿ ರಮೇಶ್‌ನನ್ನು ದೋಷಿ ಎಂದು ಗುರುತಿಸಿ ಒಟ್ಟು 20 ವರ್ಷಗಳ ಕಠಿಣ ಜೈಲು ಶಿಕ್ಷೆ, 5,000 ರೂ. ದಂಡ ಮತ್ತು ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಇದನ್ನೂ ಓದಿ: ಕಾಂಗ್ರೆಸ್ ಆಡಳಿತದಿಂದ ಕರ್ನಾಟಕ ದರೋಡೆಕೋರರ ಸ್ವರ್ಗವಾಗಿದೆ- ಆರ್.ಅಶೋಕ್