ರಾಯಚೂರು: ಮೊಹರಂ (Muharram) ಆಚರಣೆ ವೇಳೆ ಬೆಂಕಿಗೆ (Fire) ಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಲಿಂಗಸುಗೂರು (Lingsugur) ತಾಲೂಕಿನ ಯರಗುಂಟಿಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಹನುಮಂತ (45) ಎಂದು ಗುರುತಿಸಲಾಗಿದೆ. ಹಬ್ಬದ ಸಡಗರದಲ್ಲಿದ್ದಾಗ ಅವರು ಹಲಾಯಿ ಕುಣಿಗೆ ಆಯತಪ್ಪಿ ಬಿದ್ದಿದ್ದಾರೆ. ಗಂಭೀರ ಗಾಯಗಳಾಗಿದ್ದು, ಅವರು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪುತ್ತೂರು | ವಿಹರಿಸುತ್ತಿದ್ದ ಜೋಡಿಗೆ ಕಿರುಕುಳ – ನಿಂದಿಸಿ ವಿಡಿಯೋ ಹರಿಬಿಟ್ಟ ಪುಂಡರು
ಗಾಯಾಳುವನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್