ಮಹಿಳೆಯರ ಮುಂದೆ ನಗ್ನತೆ ಪ್ರದರ್ಶನ – ವ್ಯಕ್ತಿಯ ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿದ ಜನ

1 Min Read

ಭೋಪಾಲ್: ಮಹಿಳೆಯರು ಮತ್ತು ಯುವತಿಯರ ಮುಂದೆ ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಖಾಸಗಿ ಅಂಗಕ್ಕೆ ಊರಿನ ಜನ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಈ ಪ್ರಕರಣ ಸಂಬಂಧ ಪೆಟ್ರೋಲ್‌ ಹಚ್ಚಿದ ಇಬ್ಬರನ್ನು ಬಂಧಿಸಲಾಗಿದ್ದು, ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಕಜ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರತಿನಿತ್ಯ ಮಹಿಳೆಯರು ಮತ್ತು ಯುವತಿಯರ ಮುಂದೆ ವ್ಯಕ್ತಿಯೋರ್ವ ತನ್ನ ಖಾಸಗಿ ಅಂಗವನ್ನು ತೋರಿಸುವ ಮೂಲಕ ಅಶ್ಲೀಲವಾಗಿ ವರ್ತಿಸುತ್ತಿದ್ದನು. ಈ ಕುರಿತಂತೆ ಗ್ರಾಮಸ್ಥರು ಸಾಕಷ್ಟು ಬಾರೀ ಆತನಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗಣೇಶೋತ್ಸವ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಿರಿ: ಜಮೀರ್‌ಗೆ ಶ್ರೀರಾಮ ಸೇನೆ ಸವಾಲ್‌

ಹೀಗಿದ್ದರೂ ಶನಿವಾರ ಗ್ರಾಮದ ಮಹಿಳೆಯರ ಮುಂದೆ ತನ್ನ ಚಾಳಿಯನ್ನು ಮುಂದುವರೆಸಿದ್ದಕ್ಕೆ ಆತನಿಗೆ ಇಬ್ಬರು ವ್ಯಕ್ತಿಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಂತರ ಆತನ ಖಾಸಗಿ ಅಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಮಾನಸಿಕ ಅಸ್ವಸ್ಥನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದೀಗ ಸಂತ್ರಸ್ತನ ಸ್ಥಿತಿ ಗಂಭೀರವಾಗಿದ್ದು, ಈತ ಮಾನಸಿಕ ರೋಗಿ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಇಬ್ಬರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: 12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಿ ಫೋನ್‌ ಬ್ಯಾನ್‌? – ಭಾರತದಲ್ಲಿ ಯಾವ ಕಂಪನಿಯ ಪಾಲು ಎಷ್ಟಿದೆ?

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *