ಮಂಗಳೂರು: ಕರಾವಳಿಯಲ್ಲಿ ದೈವ ಮತ್ತು ದೇವರನ್ನು ಸಮಾನವಾಗಿ ಪೂಜಿಸಲಾಗುತ್ತಿದೆ. ಅದರಲ್ಲೂ ತುಳುನಾಡಿನಲ್ಲಿ ಕೊರಗಜ್ಜ (Koragajja) ದೈವ ಬೇಡಿದವರ ಇಷ್ಟಾರ್ಥ ನೆರವೇರಿಸುವುದರ ಜೊತೆಗೆ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ಮೂಲಕ ಜನರಲ್ಲಿ ನಂಬಿಕೆ ಉಳಿದುಕೊಂಡಿದೆ. ಇಂತಹ ಪವಾಡವಿರುವ ಕೊಡಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಇಟ್ಟ ಪ್ರಸಂಗ ನಡೆದಿದೆ.
ಹೌದು. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ (Belthangady) ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ಭೂ ವಿಚಾರಕ್ಕೆ ನಡೆದ ಗಲಾಟೆ ಪವಾಡಪುರುಷನ ಸನ್ನಿಧಿಗೇ ಬೆಂಕಿ ಇಡುವ ಮೂಲಕ ಅಂತ್ಯವಾಗಿದೆ.
Advertisement
Advertisement
ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಕಳೆದ ಕೆಲ ವರ್ಷಗಳಿಂದ ಈ ಸಂಬಂಧ ಸಮಿತಿ ಮತ್ತು ಖಾಸಗಿ ವ್ಯಕ್ತಿ ನಡುವೆ ತಗಾದೆ ಏರ್ಪಟ್ಟಿತ್ತು. ಈಗ ಸ್ಥಳೀಯ ವ್ಯಕ್ತಿ ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟಿದ್ದಾನೆ. ಇದನ್ನೂ ಓದಿ: ಬಿಜೆಪಿಯವರೇನು ಸಾಚಾಗಳಲ್ಲ; ಸಿಬಿಐ ಅನ್ನೋದು ಬುರುಡೆ – ಮುತಾಲಿಕ್ ಕಿಡಿ
Advertisement
Advertisement
ಘಟನೆ ಖಂಡಿಸಿ ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದೆ.
Web Stories