Connect with us

Latest

ದಂಡ ವಿಧಿಸಿದ್ದಕ್ಕೆ ಬೈಕಿಗೆ ಬೆಂಕಿ ಹಚ್ಚಿದ ವ್ಯಕ್ತಿ

Published

on

ನವದೆಹಲಿ: ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬ ಬೈಕಿಗೆ ಬೆಂಕಿ ಹಚ್ಚಿದ ಘಟನೆ ಗುರುವಾರ ನವದೆಹಲಿಯ ಶೇಖ್ ಸರಾಯ್‍ನಲ್ಲಿ ನಡೆದಿದೆ.

ರಾಕೇಶ್ ಬೈಕಿಗೆ ಬೆಂಕಿ ಹಚ್ಚಿದ ವ್ಯಕ್ತಿ. ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ ಎಂದು ಕೋಪಗೊಂಡ ರಾಕೇಶ್ ತನ್ನ ಬೈಕಿಗೆ ಬೆಂಕಿ ಹಚ್ಚಿದ್ದಾನೆ. ವರದಿಗಳ ಪ್ರಕಾರ ಪೊಲೀಸರು ಚೆಕ್ಕಿಂಗ್ ನಡೆಸುತ್ತಿದ್ದಾಗ ರಾಕೇಶ್ ಅಲ್ಲಿಗೆ ಬಂದಿದ್ದಾನೆ. ಈ ವೇಳೆ ರಾಕೇಶ್ ಮದ್ಯದ ನಶೆಯಲ್ಲಿ ಇದ್ದನು ಎಂದು ಹೇಳಲಾಗುತ್ತಿದೆ.

ಪೊಲೀಸರು ಚೆಕ್ಕಿಂಗ್ ನಡೆಸಿದ ನಂತರ ಆತನಿಗೆ ಚಲನ್ ನೀಡಿದ್ದಾರೆ. ಇದರಿಂದ ಕೋಪಗೊಂಡ ಬೈಕ್ ಸವಾರ ತನ್ನ ಬೈಕಿಗೆ ಬೆಂಕಿ ಹಚ್ಚಿದ್ದಾನೆ. ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಸದ್ಯ ಪೊಲೀಸರು ರಾಕೇಶ್‍ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಕೇಶ್ ಕುಡಿದಂತೆ ಕಾಣುತ್ತಿದ್ದನು. ಹಾಗಾಗಿ ಆತನಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದೇವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.