ನವದೆಹಲಿ: ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕೋರ್ಟ್ (Court) ನೋಟಿಸ್ (Notice) ಕಳುಹಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಬೆಂಕಿ (Fire) ಹಚ್ಚಿಕೊಂಡು ಸಾವನ್ನಪ್ಪಿದ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.
ದೆಹಲಿಯ ಗೋಕಲ್‍ಪುರಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ವಂಶಿಕಾ ಕಲೆಕ್ಷನ್ಸ್ ಮಾಲೀಕ ಕಪಿಲ್ ಕುಮಾರ್ (33) ಎಂದು ಗುರುತಿಸಲಾಗಿದೆ. ನ್ಯಾಯಾಲಯದ ಆದೇಶದಂತೆ ಕೆಲವು ಅಧಿಕಾರಿಗಳು ಗೋಕಲ್ ಪುರಿ ಪೊಲೀಸ್ ಠಾಣೆಗೆ ಆಗಮಿಸಿ ಆಸ್ತಿ ಸ್ವಾಧೀನಪಡಿಸಿಕೊಳ್ಳಲು ಪೊಲೀಸರ ಸಹಾಯವನ್ನು ಕೋರಿದ್ದರು. ಅದರಂತೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಪೊಲೀಸ್ ಠಾಣೆಯ ಸಿಬ್ಬಂದಿ ಹೋಗಿದ್ದಾರೆ.
ಈ ವಿಷಯ ತಿಳಿಯುತ್ತಿದ್ದಂತೆ ಕಪಿಲ್ ತನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳದಂತೆ ಒತ್ತಾಯಿಸಿದ್ದಾನೆ. ಅಷ್ಟೇ ಅಲ್ಲದೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಅಲ್ಲಿದ್ದ ಜನರು ಆತನನ್ನು ರಕ್ಷಿಸಲು ಹಾಗೂ ಬೆಂಕಿ ನಂದಿಸಲು ಪ್ರಯತ್ನಿಸಿದನು. ಇದನ್ನೂ ಓದಿ: ಸಿಲಿಂಡರ್ ಬ್ಲಾಸ್ಟ್- ಗುಡಿಸಲು ಬೆಂಕಿಗಾಹುತಿ, ಮಗಳ ಚಿಕಿತ್ಸೆಗೆ ತೆಗೆದಿಟ್ಟ ಹಣವೂ ಭಸ್ಮ
ತಕ್ಷಣ ಅವರನ್ನು ಪೊಲೀಸ್ ಸಿಬ್ಬಂದಿ ಜಿಟಿಬಿ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಗೋಕಲ್ ಪುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ