ಲಕ್ನೊ: ಯುವಕನೊಬ್ಬ ಲಿವ್- ಇನ್- ಪಾರ್ಟ್ನರ್ ಲ್ಲಿದ್ದ (Live-In-Partner) ವಿಧವೆಯ ಹಣೆ ಹಾಗೂ ಎದೆಗೆ ಗುಂಡಿಟ್ಟು ಬರ್ಬರವಾಗಿ ಕೊಲೆ ಮಾಡಿದ ಘಟನೆ ಉತ್ತರಪ್ರದೇಶಲ್ಲಿ ನಡೆದಿದೆ.
ಆರೋಪಿ ಯುವಕನನ್ನು ರಿಷಭ್ ಸಿಂಗ್ ಬಹದೂರಿಯಾ ಹಾಗೂ ಮೃತಳನ್ನು ರಿಯಾ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಡ್ಯಾಂನಲ್ಲಿ ತುಂಬಿ ಹಿಡಿದುಟ್ಟುಕೊಳ್ಳಲು ಆಗದೇ ಇದ್ದಾಗ ತಮಿಳುನಾಡಿಗೆ ನೀರು ಬಿಟ್ಟಿದ್ವಿ: ಹೆಚ್‍ಡಿಕೆ
ಈ ಜೋಡಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ಯಾರಡೈಸ್ ಕ್ರಿಸ್ಟಲ್ ಅಪಾರ್ಟ್‍ಮೆಂಟ್‍ನಲ್ಲಿ ಬಾಡಿಗೆ ಫ್ಲ್ಯಾಟ್‍ನಲ್ಲಿ ವಾಸವಾಗಿದ್ದರು. ಆದರೆ ಗುರುವಾರ ಕ್ಲುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ರಿಯಾಳನ್ನು ರಿಷಭ್ ಬರ್ಬರವಾಗಿ ಕೊಲೆ ಮಾಡಿದ್ದಾನೆ. ನಂತರ ಪೊಲೀಸರಿಗೆ ಶರಣಾಗಿದ್ದಾನೆ.
ಕೂಡಲೇ ಪೊಲೀಸರು ಆರೋಪಿಯನ್ನು ಬಂಧಿಸಿ, ಕೊಲೆಗೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದಿದ್ದಾರೆ. ಇತ್ತ ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ದೆಹಲಿಯಿಂದ ಪುಣೆಗೆ ಹೊರಡಬೇಕಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
ಆಗಸ್ಟ್ 17ರಂದು ರಾತ್ರಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಗೆ ಕರೆಯೊಂದು ಬಂದಿದೆ. ಕರೆ ಮಾಡಿದ ವ್ಯಕ್ತಿ ಅಪಾರ್ಟ್‍ಮೆಂಟ್‍ನಲ್ಲಿ ಲಿವ್ ಇನ್ ಪಾರ್ಟ್ನರ್ ಕೊಲೆಯಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಡಿಸಿಪಿ ವಿನೀತ್ ಜೈಸ್ವಾಲ್ ಹೇಳಿದರು.
Web Stories