CrimeLatestMain PostNational

14ರ ಬಾಲಕಿಯ ಕತ್ತು ಸೀಳಿ, ಮುಖಕ್ಕೆ ಆ್ಯಸಿಡ್ ಹಾಕಿದ ಪಾಪಿ

ಅಮರಾವತಿ: ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯ ಕತ್ತು ಸೀಳಿ, ಆಕೆಯ ಮುಖಕ್ಕೆ ಆ್ಯಸಿಡ್ ಹಾಕಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.

ಭೀಕರ ಕೃತ್ಯ ಎಸಗಿರುವ ಆರೋಪಿ ಬಾಲಕಿಯ ಕುಟುಂಬದ ಹತ್ತಿರದ ಸಂಬಂಧಿ ಎಂದು ಹೇಳಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆ್ಯಸಿಡ್ ದಾಳಿಗೆ ತುತ್ತಾದ ಬಾಲಕಿಯನ್ನು ಮೊದಲಿಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಅಪೋಲೋ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯೇನು?
ವರದಿಗಳ ಪ್ರಕಾರ ಕೃತ್ಯ ಎಸಗಿರುವ ಆರೋಪಿ ಸಂತ್ರಸ್ತೆಯ ಹತ್ತಿರದ ಸಂಬಂಧಿಯಾಗಿದ್ದು, ಹಣದ ಆಸೆಯಿಂದ ಬಾಲಕಿ ಮೇಲೆ ಹಲ್ಲೆ ನಡೆಸಿದ್ದಾನೆ. ಸೋಮವಾರ ಮಧ್ಯಾಹ್ನ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮದ್ಯದ ಅಮಲಿನಲ್ಲಿದ್ದ ಆತ ಕಳ್ಳತನಕ್ಕಾಗಿ ಬಂದಿದ್ದ. ಮನೆಯೊಳಗೆ ಹೊಕ್ಕ ಆರೋಪಿ ಬಾಲಕಿ ಮೇಲೆ ಆ್ಯಸಿಡ್ ದಾಳಿ ನಡೆಸಿ, ಕತ್ತು ಕುಯ್ದಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಚೀನಾ ಭೂಕಂಪ – ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ ವೀಡಿಯೋಗಳು

ಘಟನೆ ಬಗ್ಗೆ ತಿಳಿದ ಸ್ಥಳೀಯರು ತಕ್ಷಣವೇ ಬಾಲಕಿಯ ತಂದೆಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ. ಬಳಿಕ 108 ಸಹಾಯವಾಣಿಗೆ ಕರೆ ಮಾಡಿ, ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

CRIME

ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಭಾರತೀಯ ದಂಡಸಂಹಿತೆ(ಐಪಿಸಿ) ಹಾಗೂ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ್ಯಸಿಡ್ ದಾಳಿಯಿಂದಾಗಿ ಬಾಲಕಿಯ ಮುಖ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಮಾತೀರದಲ್ಲಿ ಮತ್ತೆ ರಕ್ತಪಾತ – ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದ ತಮ್ಮ

Live Tv

Leave a Reply

Your email address will not be published.

Back to top button