ದಿಸ್ಪುರ್: ಮಹಿಳೆಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಅಸ್ಸಾಂನ (Assam) ಗುವಾಹಟಿಯಲ್ಲಿ ನಡೆದಿದೆ. ಕೊಲೆಯ ಬಳಿಕ ಆತ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ.
ಹತ್ಯೆಗೀಡಾದ ಮಹಿಳೆಯನ್ನು ಮೌಸುಮಿ ಗೊಗೊಯ್ ಎಂದು ಗುರುತಿಸಲಾಗಿದೆ. ಚಾಕು ಇರಿದ ಆರೋಪಿಯನ್ನು ಭೂಪೇನ್ ದಾಸ್ ಎಂದು ಗುರುತಿಸಲಾಗಿದೆ. ಲೇಟ್ ಗೇಟ್ ಪ್ರದೇಶದ ಮಹಿಳೆಯ ನಿವಾಸದ ಹೊರಗೆ ಕೊಲೆ ನಡೆದಿದ್ದು, ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ಆರೋಪಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನನ್ನು ಶೀಘ್ರದಲ್ಲೇ ಕಸ್ಟಡಿಗೆ ಪಡೆಯಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಗೊಗೊಯ್ ಆ್ಯಪ್ ಮೂಲಕ ಬುಕ್ ಮಾಡಿದ್ದ ವಾಹನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ಆರೋಪಿ ಭೂಪೇನ್ ದಾಸ್ ತನ್ನ ಕಾರಿನಲ್ಲಿ ಬಂದು ಆಕೆಗೆ ಇರಿದಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಆದರೂ ಯಾವುದೇ ಪ್ರಯೋಜನವಾಗಿಲ್ಲ.
Advertisement
Advertisement
ಗೊಗೊಯ್ ಅವರು ಈ ಹಿಂದೆ ಪಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ತನಗೆ ಜೀವ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.