ಬೀದರ್: ಕೌಟುಂಬಿಕ ಕಲಹದಿಂದ ಮನನೊಂದು, ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ಬೀದರ್ ನ ಅಂಬೇಡ್ಕರ್ ವೃತ್ತದಲ್ಲಿ ಇಂದು ನಡೆದಿದೆ.
Advertisement
ಪ್ರಕಾಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಈತ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಲ್ಲೆಪೂರ್ ನಿವಾಸಿ. ಈತ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಳ್ಳುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿಯ ಸಂಪರ್ಕ ಸಿಗದೇ ಪಾಲಕರು ಕಂಗಾಲು
Advertisement
Advertisement
ನಂತರ ನೀರು ಸುರಿದು ಆತ್ಮಹತ್ಯೆಗೆ ಯತ್ನ ಮಾಡುತ್ತಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಮಾರ್ಕೆಟ್ ಪೋಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನ ಬಹುಮಹಡಿ ಕಟ್ಟಡಕ್ಕೆ ಕ್ಷಿಪಣಿ ದಾಳಿ ನಡೆಸಿದ ರಷ್ಯಾ – ಭೀಕರ ದೃಶ್ಯ ವೈರಲ್