LatestMain PostNational

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಗೆ ಟ್ರಕ್ ಗುದ್ದಿ ಸಾವು – ರಾಹುಲ್ ಸಂತಾಪ

ಮುಂಬೈ: ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಭಾಗವಹಿಸಿದ್ದ 62 ವರ್ಷದ ವ್ಯಕ್ತಿಯೊಬ್ಬರಿಗೆ ಟ್ರಕ್ (Truck) ಡಿಕ್ಕಿ ಹೊಡೆದು, ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.

ವರದಿಗಳ ಪ್ರಕಾರ ಯಾತ್ರೆಯಲ್ಲಿ ಭಾಗವಹಿಸಿದ್ದ ತಮಿಳುನಾಡು ಮೂಲದ ವ್ಯಕ್ತಿ ಗಣೇಶನ್ ಪೊನ್ರಾಮನ್ ಸಾವನ್ನಪ್ಪಿದ್ದಾರೆ. ಗುರುವಾರ ನಾಂದೇಡ್‌ನಲ್ಲಿ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಅವರು ಯಾತ್ರೆಯ ರಾತ್ರಿ ವೇಳೆಯ ಶಿಬಿರಕ್ಕೆ ಅರ್ಧಪುರ ತೆಹಸಿಲ್‌ನ ಪಿಂಪಲ್ಗಾಂವ್ ಮಹದೇವ್ ಗ್ರಾಮಕ್ಕೆ ತೆರಳುತ್ತಿದ್ದಾಗ ಸುಮಾರು 8:20 ರ ವೇಳೆಗೆ ಅಪಘಾತ ಸಂಭವಿಸಿದೆ.

 

ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆಯಲ್ಲಿ ಪಕ್ಷದ ನಿಜವಾದ ಸೈನಿಕ ಹಾಗೂ ಪ್ರೀತಿಯ ಒಡನಾಡಿಯಾಗಿದ್ದವರನ್ನು ನಾವು ಕಳೆದುಕೊಂಡಿದ್ದೇವೆ ಎಂದಿದ್ದಾರೆ.

ನಮ್ಮ ಸಹಯಾತ್ರಿ ಪಿ. ಗಣೇಶನ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಕಳೆದ 3 ದಶಕಗಳಲ್ಲಿ ಪಕ್ಷದ ಪ್ರತಿ ಯಾತ್ರೆ ಮತ್ತು ಪ್ರಚಾರದಲ್ಲಿ ಭಾಗವಹಿಸಿದ ಕಾಂಗ್ರೆಸ್‌ನ ಬದ್ಧತೆಯ ಕಾರ್ಯಕರ್ತರಾಗಿದ್ದರು. ನಾವು ಇಂದು ಭಾರತ್ ಜೋಡೋ ಯಾತ್ರೆಯಲ್ಲಿ ಪಕ್ಷದ ನಿಜವಾದ ಸೈನಿಕ ಮತ್ತು ಪ್ರೀತಿಯ ಒಡನಾಡಿಯನ್ನು ಕಳೆದುಕೊಂಡಿದ್ದೇವೆ. ನಾನು ಅವರ ಕುಟುಂಬ ಮತ್ತು ಹಿತೈಷಿಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ದೇಶ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅವರ ಸಮರ್ಪಣೆ ನಮ್ಮ ದೇಶವನ್ನು ಒಗ್ಗೂಡಿಸುವ ನಮ್ಮ ಪ್ರಯತ್ನದಲ್ಲಿ ನಮಗೆಲ್ಲರಿಗೂ ಸ್ಫೂರ್ತಿಯಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇದನ್ನೂ ಓದಿ: ಕೊಳ್ಳೇಗಾಲ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ – ಹಾಲಿ, ಮಾಜಿ ಶಾಸಕರ ನಡುವೆ ಟಿಕೆಟ್ ಫೈಟ್!

ನವೆಂಬರ್ 7 ರಂದು ಮಹಾರಾಷ್ಟ್ರಕ್ಕೆ ಆಗಮಿಸಿದ ಭಾರತ್ ಜೋಡೋ ಯಾತ್ರೆ 65 ನೇ ದಿನಕ್ಕೆ ಕಾಲಿಟ್ಟಿದೆ. ನಾಂದೇಡ್ ನಂತರ ನೆರೆಯ ಹಿಂಗೋಲಿ ಜಿಲ್ಲೆಗೆ ಯಾತ್ರೆ ತೆರಳಲಿದೆ. ಇದನ್ನೂ ಓದಿ: ಧರ್ಮವೀರ ಸಂಭಾಜಿ ಮಹಾರಾಜರಿಗೆ ಸತೀಶ್ ಜಾರಕಿಹೊಳಿ ಅಪಮಾನ ಮಾಡಿದ್ದಾರೆ: ದೇವೇಂದ್ರ ಫಡ್ನವೀಸ್

Live Tv

Leave a Reply

Your email address will not be published. Required fields are marked *

Back to top button