ಲಕ್ನೋ: ನಡೆದುಕೊಂಡು ಹೋಗುತ್ತಿದ್ದ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಕಾರು ಹತ್ತಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಉತ್ತರಪ್ರದೆಶದ (Uttarpradesh) ಲಕ್ನೋದಲ್ಲಿ ಮಂಗಳವಾರ ನಡೆದಿದೆ.
ಘಟನೆಯ ದೃಶ್ಯವು ಸ್ಥಳೀಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್ ವೈರಲ್ ಆಗುತ್ತಿದ್ದು, ಚಾಲಕನ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
Advertisement
#Lucknow: In an incident captured in CCTV in Malihabad Kazikheda village, car driver Govind tried to take revenge of enmity with Virendra by ramming his 3 innocent children, the children were seriously injured, the accused arrested.#UttarPradesh pic.twitter.com/1rygNuBpAQ
— Siraj Noorani (@sirajnoorani) July 18, 2023
Advertisement
ವೀಡಿಯೋದಲ್ಲೇನಿದೆ..?: ಇಬ್ಬರು ಹುಡುಗರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾರೆ. ಅದರಲ್ಲಿ ಓರ್ವ ಚಿಕ್ಕ ಮಗುವನ್ನು ಎತ್ತಿಕೊಂಡಿದ್ದಾನೆ. ಹೀಗೆ ಅವರು ತಮ್ಮ ಪಾಡಿಗೆ ತಾವು ನಡೆದುಕೊಂಡು ಹೋಗುತ್ತಿರುವಾಗ ಏಕಾಏಕಿ ಎದರುರಿನಿಂದ ಬಂದ ಸ್ವಿಫ್ಟ್ ಡಿಸೈರ್ (Swift Desire) ಕಾರನ್ನು ಚಾಲಕ ಮಕ್ಕಳ ಮೇಲೆ ಹತ್ತಿಸಿದ್ದಾನೆ. ಆದರೆ ಅದೃಷ್ಟವಶಾತ್ ಮೂವರು ಮಕ್ಕಳು ಭಾರೀ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಪರಿಹಾರ ಸಿಕ್ಕರೆ ಮಗನ ಕಾಲೇಜು ಶುಲ್ಕ ಕಟ್ಟಬಹುದು ಅಂತ ಬಸ್‌ಗೆ ಅಡ್ಡ ಬಂದ ಮಹಿಳೆ ಅಪಘಾತದಲ್ಲಿ ಸಾವು
Advertisement
Advertisement
ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕಾಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಚಾಲಕನನ್ನು ಗೋವಿಂದ್ ಯಾದವ್ ಎಂದು ಗುರುತಿಸಲಾಗಿದೆ. ಈತ ಅದೇ ಏರಿಯಾದ ನಿವಾಸಿಯಾಗಿದ್ದು, ಮಕ್ಕಳ ತಂದೆಯ ಜೊತೆಗೆ ಇದ್ದಂತಹ ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿದ್ದಾನೆ ಎಂಬುದಾಗಿ ತನಿಖೆಯ ವೇಳೆ ಬಯಲಾಗಿದೆ.
Web Stories