ಅಹಮದಾಬಾದ್: ಭಾರತ (Team India) ಪಾಕ್ ಪಂದ್ಯದ ವೇಳೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ವ್ಯಕ್ತಿಯೊಬ್ಬನ ನಡುವೆ ನಡೆದ ಗಲಾಟೆಯ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವೀಡಿಯೋದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ (Woman Cop) ಹಾಗೂ ವ್ಯಕ್ತಿಯ ನಡುವೆ ವಾಗ್ವಾದವಾಗಿದೆ. ಈ ವೇಳೆ ಪೊಲೀಸ್‍ಗೆ ವ್ಯಕ್ತಿ ಕಪಾಳಮೋಕ್ಷ ಮಾಡಲು ಮುಂದಾಗಿದ್ದ. ಆಗ ವ್ಯಕ್ತಿಗೆ ಪೊಲೀಸ್ ಸಿಬ್ಬಂದಿ ಕೆನ್ನೆಗೆ ಹೊಡೆದಿದ್ದಾರೆ. ಬಳಿಕ ಇಬ್ಬರ ನಡುವೆ ಗಲಾಟೆ ಹೆಚ್ಚಾಗುತ್ತಿದ್ದಂತೆ ಉಳಿದ ಪ್ರೇಕ್ಷಕರು ಅವರಿಬ್ಬರನ್ನೂ ಸಮಾಧಾನ ಪಡೆಸಿದ್ದಾರೆ. ಇದನ್ನೂ ಓದಿ: ಸಿಕ್ಸ್ ಸಿಡಿಸಿ ದಾಖಲೆ ಬರೆದ ರೋಹಿತ್ ಶರ್ಮಾ
Advertisement
Advertisement
ಈ ವೀಡಿಯೋ ಬಗ್ಗೆ ನೆಟ್ಟಿಗರು ಪರ ವಿರೋಧ ಚರ್ಚೆಗಳನ್ನು ನಡೆಸಿದ್ದಾರೆ. ಕೆಲವರು ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಬಾರದಿತ್ತು ಎಂದು ಹೇಳಿದ್ದಾರೆ. ಇನ್ನೂ ಕೆಲವರು ಅಲ್ಲಿ ಏನು ನಡೆಯಿತು ಎಂದು ಪ್ರಶ್ನಿಸಿದ್ದಾರೆ.
Advertisement
Advertisement
ಇದರ ನಡುವೆ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಜಯಗಳಿಸಿತು. ಈ ಮೂಲಕ ಪಾಕ್ ವಿರುದ್ಧದ ಪಂದ್ಯದಲ್ಲಿ 8-0 ವಿಜಯಯಾತ್ರೆಯನ್ನು ಮುಂದುವರೆಸಿದೆ. ಇದನ್ನೂ ಓದಿ: ಭಾರತದ ಬೆಂಕಿ ಬೌಲಿಂಗ್, ರೋʼಹಿಟ್ʼ ಬ್ಯಾಟಿಂಗ್‌ಗೆ ಪಾಕ್ ಭಸ್ಮ – ಮೊದಲ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ
Web Stories