ಭೋಪಾಲ್: ಬುಡಕಟ್ಟು ಜನಾಂಗದ (Tribal) ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ (Urination) ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಆತನನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ.
ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿರುವ ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ ನೆಲೆದ ಮೇಲೆ ಕುಳಿತಿರುವ ವ್ಯಕ್ತಿಯೊಬ್ಬರ ಮೇಲೆ ಆರೋಪಿ ಸಿಗರೇಟ್ ಸೇದುತ್ತಾ ಅಮಲೇರಿದ ಸ್ಥಿತಿಯಲ್ಲಿ ಮೂತ್ರವಿಸರ್ಜಿಸಿರುವುದು ಕಂಡುಬಂದಿದೆ. ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಮಧ್ಯಪ್ರದೇಶದ ರಾಜಕೀಯದಲ್ಲಿ ಗದ್ದಲ ಉಂಟಾಗಿದೆ.
Advertisement
#WATCH | Sidhi viral video: Madhya Pradesh police takes accused Pravesh Shukla into custody. Earlier a case was registered against him under sections 294,504 IPC and SC/ST Act. #MadhyaPradesh pic.twitter.com/DY3hJCR64O
— ANI (@ANI) July 4, 2023
Advertisement
ಆರೋಪಿ ವ್ಯಕ್ತಿಯನ್ನು ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದ್ದು, ಆತ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿದೆ. ಮಾತ್ರವಲ್ಲದೇ ರೇವಾದ ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಅವರೊಂದಿಗಿನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ. ಹಲವು ಕಾಂಗ್ರೆಸ್ ನಾಯಕರು ವೈರಲ್ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
Advertisement
ಆದರೂ ಬಿಜೆಪಿ ಆರೋಪಿ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಆತ ನಮ್ಮ ಕ್ಷೇತ್ರದವನು ಎಂಬುದು ನಮಗೆ ತಿಳಿದಿದೆ. ಆದರೆ ಆತ ನಮ್ಮ ಪ್ರತಿನಿಧಿ ಅಥವಾ ಬಿಜೆಪಿ ಕಾರ್ಯಕರ್ತನಲ್ಲ ಎಂದು ಕೇದಾರ್‌ನಾಥ್ ಶುಕ್ಲಾ ಹೇಳಿದ್ದಾರೆ. ಇದನ್ನೂ ಓದಿ: ಮೂಲಭೂತ ಸೌಕರ್ಯವಿಲ್ಲದೇ ಕುಗ್ಗಿದ ಜನ- ಪಯಸ್ವಿನಿ ನದಿಗೆ ಬಿದಿರಿನ ಸೇತುವೆ ಸಂಕಷ್ಟ
Advertisement
ವೀಡಿಯೋ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆತನ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದಾರೆ.
ಪೊಲೀಸರು ತಕ್ಷಣವೇ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆರೋಪಿ ಬಂಧನದಿಂದ ತಪ್ಪಿಸಿಕೊಳ್ಳಲು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಓಡಿಹೋಗುತ್ತಿದ್ದ. ನಂತರ ಆತನನ್ನು ಮಧ್ಯರಾತ್ರಿ 2 ಗಂಟೆಗೆ ಹಿಡಿದು ವಿಚಾರಣೆಗೆ ಒಳಪಡಿಸಲಾಗಿದೆ. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆ ಹಾಗೂ ಭಾರತೀಯ ದಂಡಸಂಹಿತೆಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಭಾಗವಾಗಿ ಆರೋಪಿಯ ಪತ್ನಿ ಹಾಗೂ ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಕೆ.ಜಿ ಟೊಮೆಟೋಗೆ 129 ರೂ., ಯುಪಿಯಲ್ಲಿ 150 ರೂ.!
Web Stories