LatestMain PostNational

ಪತ್ನಿ ಕೊಂದು ಪೊದೆಯಲ್ಲಿ ಶವ ಎಸೆದೆ – ಠಾಣೆಗೆ ಹೋಗಿ ಪೊಲೀಸರಿಗೆ ಶರಣಾದ ಪತಿ

ಲಕ್ನೋ: ಪತ್ನಿಯನ್ನು ಹತ್ಯೆಗೈದು ಶವವನ್ನು ಗಾಜಿಯಾಬಾದ್‍ನ (Ghaziabad) ಟ್ರೋನಿಕಾ ನಗರದಲ್ಲಿ (Tronica city) ಎಸೆದು ಪತಿಯೇ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ನಾನು ನನ್ನ ಹೆಂಡತಿಯನ್ನು ಕೊಂದಿದ್ದೇನೆ. ಶವವನ್ನು ಟ್ರೋನಿಕಾ ನಗರ ಪ್ರದೇಶದಲ್ಲಿ ಎಸೆದಿದ್ದೇನೆ ಎಂದು ಆರೋಪಿ ಪೊಲೀಸ್ ಠಾಣೆಗೆ ತೆರಳಿ ಸತ್ಯ ಹೇಳಿದ್ದಾನೆ. ನಂತರ ಈ ಘಟನೆ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು, ನಂತರ ಘಟನಾ ಸ್ಥಳಕ್ಕೆ ತಲುಪಿ ಮಹಿಳೆಯ ಶವವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ನಾವೇನಾದರೂ ಸಿಡಿದೆದ್ದರೆ ನೀವು ಉಳಿಯುವುದಿಲ್ಲ – ಕಾಂಗ್ರೆಸ್‍ಗೆ ಮುತಾಲಿಕ್ ವಾರ್ನಿಂಗ್

CRIME 2

ಆರೋಪಿಯನ್ನು ಸದ್ದಾಂ ಎಂದು ಗುರುತಿಸಲಾಗಿದ್ದು, ತನ್ನ ಪತ್ನಿ ಮೇಲೆ ಅನುಮಾನ ಹೊಂದಿದ್ದರಿಂದ ಈ ಕೃತ್ಯವೆಸಗಿರುವುದಾಗಿ ಹೇಳಿದ್ದಾನೆ. ಗುರುವಾರ ಸದ್ದಾಂ ತನ್ನ ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯನ್ನು ಕೊಲೆ ಮಾಡಿ, ನಂತರ ದೇಹವನ್ನು ಟ್ರೋನಿಕಾ ನಗರದಲ್ಲಿ ಪೊದೆಯೊಂದರಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿ ಕೊಂದ ಬಳಿಕ, ಪೊಲೀಸ್ ಠಾಣೆಗೆ ಬಂದು ಸದ್ದಾಂ ತಪ್ಪೊಪ್ಪಿಕೊಂಡಿದ್ದಾನೆ. ಮೃತ ಮಹಿಳೆಗೆ ಸುಮಾರು 28 ವರ್ಷ ವಯಸ್ಸಾಗಿದ್ದು, ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರಾ ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಕಿನ್ನಾಳ ಕಲೆಯ ಕಾಮಧೇನು ಉಡುಗೊರೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ

Live Tv

Leave a Reply

Your email address will not be published. Required fields are marked *

Back to top button