ಬೆಳಗಾವಿ: ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಮೇತ ವ್ಯಕ್ತಿ ನೀರಲ್ಲಿ ಕೊಚ್ಚಿಕೊಂಡು ಹೋದ ಘಟನೆ ಬೆಳಗಾವಿಯ (Belagavi) ತಾರಿಹಾಳ ಬಳಿ ನಡೆದಿದೆ.
ಹಳ್ಳ ದಾಟುವಾಗ ಬೈಕ್ (Bike) ಸಮೇತ ನೀರಿನಲ್ಲಿ ಪಂಚಾಯತ್ ಸಿಬ್ಬಂದಿ ಸುರೇಶ್ ನಿಜಗುಣಿ ಗುಂಡನ್ನವರ್ (50) ಕೊಚ್ಚಿ ಹೋಗಿದ್ದಾರೆ. ಇದನ್ನೂ ಓದಿ: Rain Alert | ಇಂದು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ – ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ
ಪಂಚಾಯತ್‌ನಲ್ಲಿ ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಘಟನೆ ನಡೆದಿದೆ. ಸುರೇಶ್‌ಗಾಗಿ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.