ಚೆನ್ನೈ: ಗಣೇಶ ಚತುರ್ಥಿ ಆಚರಣೆ ವೇಳೆ ತಮಿಳುನಾಡಿನ (Tamil Nadu) ವೆಲ್ಲೂರು ಮೂಲದ ವ್ಯಕ್ತಿಯೊಬ್ಬ ಬುರ್ಕಾ ಧರಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಆತನನ್ನು ಬಂಧಿಸಲಾಗಿದೆ.
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ (Ganesh procession) ವೇಳೆ ವ್ಯಕ್ತಿಯೊಬ್ಬ ಬುರ್ಕಾ ಧರಿಸಿ (Burqa Dances) ನೃತ್ಯ ಮಾಡಿದ್ದ. ಈ ದೃಶ್ಯದ ವೀಡಿಯೋ ವೈರಲ್ ಆಗಿತ್ತು. ಬುರ್ಕಾ ಧರಿಸಿದ್ದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದನ್ನೂ ಓದಿ: ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನ: ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸ್
ದೂರು ಆಧರಿಸಿ ಪೊಲೀಸರು ತನಿಖೆ ನಡೆಸಿ, ವಿರುತ್ತಂಪಟ್ಟು ಮೂಲದ ಅರುಣ್‌ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಇತರರ ಪತ್ತೆಗೆ ಪೊಲೀಸರು ಮುಂದಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಎರಡು ಸಮುದಾಯಗಳ ನಡುವೆ ದ್ವೇಷ ಉಂಟು ಮಾಡಲು ಯತ್ನಿಸಿದ ಆರೋಪದಡಿ ಅರುಣ್‌ಕುಮಾರ್‌ನನ್ನು ಬಂಧಿಸಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ಗಡಿ ನುಸುಳಿದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್‌ಎಫ್
Web Stories