ಪಾಟ್ನಾ: ಬಿಹಾರದಲ್ಲಿ (Bihar) ರಾಹುಲ್ ಗಾಂಧಿಯವರ (Rahul Gandhi) ‘ಮತದಾರ ಅಧಿಕಾರ ಯಾತ್ರೆ’ಯಲ್ಲಿ ಪ್ರಧಾನಿ ಮೋದಿ (Narendra Modi) ಹಾಗೂ ಅವರ ತಾಯಿಯನ್ನು ನಿಂದಿಸಿದ ವ್ಯಕ್ತಿಯನ್ನು ದರ್ಭಂಗಾ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ನಡೆದ ರ‍್ಯಾಲಿಯಲ್ಲಿ ವ್ಯಕ್ತಿಯೊಬ್ಬ ಕಾಂಗ್ರೆಸ್ ಪಕ್ಷದ ಶಾಲು ಧರಿಸಿ ಪ್ರಧಾನಿ ಮೋದಿ ವಿರುದ್ಧ ಹಿಂದಿಯಲ್ಲಿ ಅಶ್ಲೀಲ ಪದ ಬಳಸಿ ಮಾತಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದಾದ ಬಳಿಕ ಬಿಜೆಪಿ ಪ್ರಕರಣ ದಾಖಲಿಸಿ, ಕಾಂಗ್ರೆಸ್ ಕ್ಷಮೆಯಾಚಿಸುವಂತೆ ಒತ್ತಾಯಿಸಿತ್ತು. ಈ ಸಂಬಂಧ ರಾಹುಲ್ ಗಾಂಧಿಯವರ ವಿರುದ್ಧವೂ ದೂರು ನೀಡಲಾಗಿದೆ. ಇದನ್ನೂ ಓದಿ: ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ
ಸಿಮ್ರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ಐಆರ್ ದಾಖಲಿಸಲಾಗಿತ್ತು. ಈ ಸಂಬಂಧ ಎ1 ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ಮೋದಿ ವಿರುದ್ಧ ಬಳಸಲಾದ ಅಶ್ಲೀಲ ಭಾಷೆಯನ್ನು ಖಂಡಿಸಿದ್ದಾರೆ. ಈ ಘಟನೆ ದೇಶದ ಪ್ರಜಾಪ್ರಭುತ್ವದ ಮೇಲಿನ ಕಳಂಕವಾಗಿದೆ. ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಪಕ್ಷವು ಅತ್ಯಂತ ಕೆಳಮಟ್ಟಕ್ಕೆ ತಲುಪಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಹಲವು ಮುಖಂಡರು ಈ ಪ್ರಕರಣವನ್ನು ಖಂಡಿಸಿದ್ದಾರೆ. ಇದನ್ನೂ ಓದಿ: 75ನೇ ವರ್ಷಕ್ಕೆ ಮೋದಿ ನಿವೃತ್ತಿ ವದಂತಿ – RSS ಮುಖ್ಯಸ್ಥ ಮೋಹನ್ ಭಾಗವತ್ ಸ್ಪಷ್ಟನೆ