ಹೈದರಾಬಾದ್: ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್(K Chandrashekar Rao) ವಿರುದ್ಧ ಭ್ರಷ್ಟಾಚಾರ(Corruption) ಆರೋಪ ಮಾಡಿ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಜಯಶಂಕರ್ ಭೂಪಲಪಲ್ಲಿಯಲ್ಲಿ(Jayashankar Bhupalpally) ನಡೆದಿದೆ.
ಎನ್.ರಾಜಲಿಂಗಮೂರ್ತಿ ಕೊಲೆಯಾದ ವ್ಯಕ್ತಿ. ಕಾಳೇಶ್ವರಂ ಯೋಜನೆಯ ಭಾಗವಾಗಿ ಮೇಡಿಗಡ್ಡ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಮತ್ತು ಇತರರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್; ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? – ವಿಜಯೇಂದ್ರ
ರಾಜಲಿಂಗಮೂರ್ತಿ ಬುಧವಾರ ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಭೂ ವಿವಾದದ ಹಿನ್ನೆಲೆ ಇಬ್ಬರು ಆರೋಪಿಗಳು ಚಾಕುವಿನಿಂದ ಇರಿದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶಮಿಗೆ 5 ವಿಕೆಟ್; ಬಾಂಗ್ಲಾ ಆಲೌಟ್ – ಟೀಂ ಇಂಡಿಯಾಗೆ 229 ರನ್‌ಗಳ ಗುರಿ
ಮೇಡಿಗಡ್ಡ ಬ್ಯಾರೇಜ್‌ನ ಕೆಲವು ಕಂಬಗಳು ಮುಳುಗಿದ ನಂತರ ಕೆಸಿಆರ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜಲಿಂಗಮೂರ್ತಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಇ.ಡಿ ವಿಚಾರಣೆಯಿಂದ ಸಿಎಂ ಪತ್ನಿಗೆ ರಿಲೀಫ್ – ಪಾರ್ವತಿ, ಸಚಿವ ಬೈರತಿಗೆ ಮಧ್ಯಂತರ ರಕ್ಷಣೆ ಮುಂದುವರಿಕೆ
ಕೆಸಿಆರ್, ಅವರ ಸೋದರಳಿಯ ಮತ್ತು ಮಾಜಿ ಸಚಿವ ಟಿ.ಹರೀಶ್ ರಾವ್ ತಮ್ಮ ವಿರುದ್ಧದ ಅರ್ಜಿ ವಜಾಗೊಳಿಸಲು ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: ಚಿಕನ್ ಖರೀದಿಗೆ ಬಂದಿದ್ದ ದೈತ್ಯ ವಿದೇಶಿ ಪ್ರಜೆ ಕೊಲೆ – ಅನುಮಾನಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!