ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಪಾಕಿಸ್ತಾನದ ಗೂಢಾಚಾರಿಯೊಬ್ಬನನ್ನು ಬಂಧಿಸಲಾಗಿದೆ.
ಬಂಧಿತನನ್ನು ಜಿತೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಈತ ರಾಜಸ್ಥಾನದ ಬಾರ್ಮರ್ ನಿವಾಸಿ. ಕಾಟನ್ ಪೇಟೆಯಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಈತ ಸೇನಾಧಿರಿಸು ಧರಿಸಿ ವಂಚನೆಗೆ ಇಳಿದಿದ್ದು, ಇಂದು ಮಿಲಿಟರಿ ಇಂಟಲಿಜೆನ್ಸ್ ಹಾಗೂ ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯ ವೇಳೆ ಸಿಕ್ಕಿಬಿದ್ದಿದ್ದಾನೆ.
Advertisement
Advertisement
ಜಿತೇಂದ್ರ ಸಿಂಗ್ ಪಾಕಿಸ್ತಾನದ ISI ಜೊತೆ ಲಿಂಕ್ ಕೂಡ ಹೊಂದಿದ್ದು, ಭಾರತೀಯ ಸೇನೆಯ ಬಗ್ಗೆ ವಾಟ್ಸಪ್ ಮೂಲಕ ಮಾಹಿತಿ ನೀಡುತ್ತಿದ್ದನು ಎಂಬುದಾಗಿ ಬೆಳಕಿಗೆ ಬಂದಿದೆ. ಸದ್ಯ ಈತನನ್ನು ಕಾಟನ್ ಪೇಟೆಯ ಮೊಹಲ್ಲಾದಲ್ಲಿ ಬಂಧನ ಮಾಡಲಾಗಿದೆ. ಇದನ್ನೂ ಓದಿ: ನನ್ನ ಮಗ ಡೆತ್ ನೋಟ್ನಲ್ಲಿ ಹೇಳಿರುವುದೆಲ್ಲಾ ಸುಳ್ಳು: ಶಂಕರ್