ಶಿವಮೊಗ್ಗ: ಸಿಗಂದೂರು ದೇವಸ್ಥಾನಕ್ಕೆ (Sigandur Temple) ಬಂದಿದ್ದ ವ್ಯಕ್ತಿ ಶರಾವತಿ ಹಿನ್ನೀರಿನಲ್ಲಿ (Sharavati Backwaters) ಮುಳುಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ (Shivamogga) ಸಾಗರ ತಾಲೂಕಿನ ಸಿಗಂದೂರು ಸೇತುವೆ ಬಳಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಉಮೇಶ್ (35) ಮೃತ ದುರ್ದೈವಿ. ಆಂಧ್ರದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕು ಗಲಗಲಿ ಗ್ರಾಮದ ಉಮೇಶ್ ಕುಟುಂಬಸ್ಥರು, ಸ್ನೇಹಿತರೊಂದಿಗೆ ಸಿಗಂದೂರು ಪ್ರವಾಸಕ್ಕೆ ಬಂದಿದ್ದರು. ಚೌಡೇಶ್ವರಿ ದೇವಿಯ ದರ್ಶನ ಮುಗಿಸಿ, ಸೇತುವೆ ವೀಕ್ಷಣೆ ಮಾಡಿ ಈಜಲು ತೆರಳಿದಾಗ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ನದಿಯಿಂದ ಮೃತದೇಹ ಹೊರತೆಗೆದಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬಳ್ಳಾರಿ ಪೊಲೀಸರ ಕಾರ್ಯಾಚರಣೆ – ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ
