ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಧರ್ಮಕ್ಕೆ ಸೇರಿದ ಯುವತಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವತಿಯನ್ನು ಪೂಜಾ ಕುಮಾರಿ(18), ಆರೋಪಿಯನ್ನು ವಾಹಿದ್ ಎಂದು ಗುರುತಿಸಲಾಗಿದೆ.
ವಾಹಿದ್, ಪೂಜಾಳನ್ನು ಮತಾಂತರಗೊಳಿಸಿ ಮದ್ವೆಯಾಗಲು ಪ್ರಯತ್ನಿಸಿದ್ದಾನೆ. ಆದರೆ ಪೂಜಾ ಇದಕ್ಕೆ ಒಪ್ಪಿರಲಿಲ್ಲ. ಹೀಗಾಗಿ ವಾಹಿದ್ ಆಕೆಯನ್ನು ಅಪಹರಣ ಮಾಡುವ ಸ್ಕೆಚ್ ಹಾಕಿದ್ದಾನೆ. ಅಂತೆಯೇ ಸುಕ್ಕುರು ಜಿಲ್ಲೆಯ ಗೋಟ್ಕಿ ಜಿಲ್ಲೆಯಲ್ಲಿ ಪೂಜಾ ವಾಸವಿರುವ ಮನೆಗೆ ನುಗ್ಗಿ ಆಕೆಯನ್ನು ಅಪಹರಣ ಮಾಡಲು ಯತ್ನಿಸಿದ್ದಾನೆ. ಇದನ್ನೂ ಓದಿ: ಮಾರುಕಟ್ಟೆಗಳಲ್ಲಿ ಸಕ್ಕರೆಗಾಗಿ ರಷ್ಯನ್ನರ ಕಿತ್ತಾಟ- ವೀಡಿಯೋ ವೈರಲ್
Advertisement
Advertisement
ಇದಕ್ಕೆ ಪೂಜಾ ಪ್ರತಿರೋಧ ಒಡ್ಡಿದ್ದಾಳೆ. ಇದರಿಂದ ಸಿಟ್ಟಿಗೆದ್ದ ವಾಹಿದ್ ಆಕೆಯನ್ನು ಅಲ್ಲಿಯೇ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಬಳಿಕ ಸ್ಥಳದಿಂದ ಕಾಲಿತ್ತಿದ್ದಾನೆ. ಸದ್ಯ ಘಟನೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿರುವುದಾಗಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
Advertisement
Advertisement
ಘಟನೆ ಬಳಿಕ ಪೂಜಾ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದು, ಆರೋಪಿಗೆ ತಕ್ಕ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಇತ್ತ ಟ್ವಿಟ್ಟರ್ ನಲ್ಲಿ #JusticeForPoojaKumari ಟ್ರೆಂಡಿಂಗ್‍ನಲ್ಲಿದೆ. ಸದ್ಯ ಪಾಕಿಸ್ತಾನದಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ. ಪ್ರತಿ ವರ್ಷ ನೂರಾರು ಕ್ರೈಸ್ತ ಮತ್ತು ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರವಾಗುವಂತೆ ಬಲವಂತ ಮಾಡಲಾಗುತ್ತಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಆರೋಪಿಸಿದ್ದಾರೆ. ಇದನ್ನೂ ಓದಿ: ತಾಲಿಬಾನ್ ವಿರುದ್ಧ ಅಂತಾರಾಷ್ಟ್ರೀಯ ಕೋರ್ಟ್‌ಗೆ ದೂರು ಕೊಟ್ಟ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ಧಿಕಿ ಪೋಷಕರು
ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರ ಅಪಹರಣ ಮತ್ತು ಬಲವಂತದ ಮತಾಂತರ ನಡೆಯುತ್ತಿದೆ. ದೇಶದ ಅಲ್ಪಸಂಖ್ಯಾತ ಸಮುದಾಯಗಳು ಬಲವಂತದ ಮದುವೆ ಹಾಗೂ ಮತಾಂತರದ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ಹೇಳಲಾಗಿದೆ. ಆದರೆ ಹಿಂದೂಗಳು ಮತ್ತು ಇತರೆ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ನಿರಂತರ ಅಪರಾಧಗಳು ನಡೆಯುತ್ತಿದ್ದರೂ ಪಾಕಿಸ್ತಾನ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳಲು ಮುಂದಾಗುತ್ತಿಲ್ಲ ಎಂದು ವಿವಿಧ ಹಕ್ಕುಗಳ ಸಂಘಟನೆಗಳು ದೂರಿವೆ.