ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣದಡಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ತಿಳಿಸಿದ್ದಾರೆ.
ನಾಗ್ಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ವಿರುದ್ಧ ಹಾಕಲಾದ ಬೆದರಿಕೆಯನ್ನು ರಾಜ್ಯ ಗೃಹ ಇಲಾಖೆಗೆ ತಿಳಿದು ಬಂದಿತ್ತು. ಹೀಗಾಗಿ ಮುಖ್ಯಮಂತ್ರಿಗಳ ಭದ್ರತೆ ಮತ್ತಿತರ ವಿಚಾರಗಳ ಬಗ್ಗೆ ಸಂಪೂರ್ಣ ಗಮನ ಹರಿಸುತ್ತಿದ್ದೇವೆ. ಭಾನುವಾರ ಮುಖ್ಯಮಂತ್ರಿಗೆ ಬೆದರಿಕೆಯೊಡ್ಡಿದ ವ್ಯಕ್ತಿಯನ್ನು ಬಂಧಿಸಕಾಗಿದೆ. ಮುಖ್ಯಮಂತ್ರಿಗಳಿಗೆ ಭದ್ರತೆ ವಹಿಸುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದ್ದಾರೆ.
Advertisement
Advertisement
ಬಂಧಿತ ಆರೋಪಿಯ ಬಗ್ಗೆ ದೇವೇಂದ್ರ ಫಡ್ನವಿಸ್ ಅವರು ಯಾವುದೇ ವಿವರಗಳನ್ನು ಹಂಚಿಕೊಳ್ಳದಿದ್ದರೂ, ಪುಣೆ ಜಿಲ್ಲೆಯ ಲೋನಾವಾಲಾ ಹೋಟೆಲ್‍ನಲ್ಲಿ ಏಕನಾಥ್ ಶಿಂಧೆ ಅವರನ್ನು ಕೊಲ್ಲಲು ಸಂಚು ಮಾಡಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ ವ್ಯಕ್ತಿಯ ವಿರುದ್ಧ ನಾನ್-ಕಾಗ್ನೈಸಬಲ್ (ಎನ್‍ಸಿ) ಪ್ರಕರಣವನ್ನು ಪುಣೆ ಪೊಲೀಸರು ದಾಖಲಿಸಿದ್ದಾರೆ. ಇದನ್ನೂ ಓದಿ : ದೇವೇಗೌಡರ ಆರೋಗ್ಯ ವಿಚಾರಿಸುವ ನೆಪದಲ್ಲಿ ರಾಜಕೀಯ ನಾಯಕರು ಸಿಂಪತಿ ಗಿಟ್ಟಿಸಿಕೊಳ್ತಿದ್ದಾರೆ: ಶರವಣ
Advertisement
Advertisement
ಮದ್ಯಪಾನ ಮಾಡಿದ್ದ ಅವಿನಾಶ್ ವಾಘಮಾರೆ ಎಂಬಾತ ನೀರಿನ ಬಾಟಲಿಗೆ ಹೆಚ್ಚಿನ ಶುಲ್ಕ ವಿಧಿಸಿದ ಹಿನ್ನೆಲೆ ಹೋಟೆಲ್ ಮಾಲೀಕನಿಗೆ ಬುದ್ಧಿ ಕಲಿಸಲು ಈ ರೀತಿ ಕರೆ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿಯವರಿಗೆ ಜೀವ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಶನಿವಾರ ರಾಜ್ಯ ಗುಪ್ತಚರ ಇಲಾಖೆ (ಎಸ್‍ಐಡಿ) ಮಾಹಿತಿ ಪಡೆದಿದ್ದು, ಇದಾದ ಬಳಿಕ ಏಕನಾಥ್ ಶಿಂಧೆ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದನ್ನೂ ಓದಿ : ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಕೊಟ್ಟಿಗೆಗೆ ಕರೆದೊಯ್ದು 10ರ ಬಾಲಕನಿಂದ ಅತ್ಯಾಚಾರ