ಚಾಮರಾಜನಗರ: ಗಾಂಜಾ ಗಿಡಗಳನ್ನು (Cannabis Plant) ಬೆಳೆಯುವಂತಿಲ್ಲ, ಗಾಂಜಾ ಸೊಪ್ಪು ಮಾರಾಟ ಮಾಡುವಂತಿಲ್ಲ ಎಂಬ ಕಾನೂನು ನಮ್ಮ ದೇಶದಲ್ಲಿದೆ. ಆದರೂ ಹಲವೆಡೆ ಅಕ್ರಮ ದಾರಿಯಲ್ಲಿ ಗಾಂಜಾ ಬೆಳೆಯಲಾಗುತ್ತಿದೆ.
ಇಲ್ಲೊಬ್ಬ ಖತರ್ನಾಕ್ ವಂಚಕ, ತರಕಾರಿ ಬೆಳೆಯುವುದಾಗಿ ಮಹಿಳೆಯೊಬ್ಬರ ಜಮೀನನ್ನು ಗುತ್ತಿಗೆ ಪಡೆದು ಯಾರಿಗೂ ಅನುಮಾನ ಬಾರದಿರಲೆಂದು ಕೊತ್ತಂಬರಿ ಸೊಪ್ಪಿನ (Coriander) ಜೊತೆ ಗಾಂಜಾ ಬೆಳೆದು ಸಿಕ್ಕಿಬಿದ್ದಿದ್ದಾನೆ.
Advertisement
Advertisement
ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಕಂಡಯ್ಯನಪಾಳ್ಯ ಗ್ರಾಮದ ಹನುಮಗೌಡ(40) ಬಂಧಿತ ಆರೋಪಿಯಾಗಿದ್ದಾನೆ. ಇವನು ಸರೋಜಮ್ಮ ಅವರ ಜಮೀನನ್ನು ಗುತ್ತಿಗೆ ಪಡೆದು ಕೊತ್ತಂಬರಿ ಸೊಪ್ಪು ಬೆಳೆದಿದ್ದ. ಜಮೀನಿನ ಮಧ್ಯ ಭಾಗದಲ್ಲಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ವಲಯದ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಗಾಂಜಾ ಗಿಡಗಳು ಪತ್ತೆಯಾಗಿವೆ. ಇದನ್ನೂ ಓದಿ: ಝಿಕಾ ಆತಂಕ – ಕಾಂಡೋಮ್ ಜಾಗೃತಿ ಬಳಿಕ ಗರ್ಭಿಣಿಯರ ಮೇಲೆ ತೀವ್ರ ನಿಗಾ
Advertisement
Advertisement
ಪೊಲೀಸರು ಜಮೀನಿನಲ್ಲಿ ಬೆಳೆದಿದ್ದ 348 ಗ್ರಾಂ ತೂಕದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ: ಡಿಕೆಶಿ ಪ್ರಶ್ನೆ