ಮಡಿಕೇರಿ: ಕಳೆದ ನಾಲ್ಕೈದು ದಿನಗಳ ಹಿಂದೆ ನಾಪತ್ತೆ ಯಾಗಿದ್ದ ಕೊಡಗಿನ (Kodagu) ಸೋಮವಾರಪೇಟೆಯ ಸಂಪತ್‌ಗಾಗಿ ಕೊಡಗು ಮತ್ತು ಹಾಸನ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಹುಡುಕಾಟ ನಡೆಸುತ್ತಿದ್ದರು. ಈ ನಡುವೆ ಇಂದು ಸಂಪತ್‌ನ ಮೃತ ದೇಹ ಪತ್ತೆಯಾಗಿದೆ.
ಹಾಸನ (Hassan) ಜಿಲ್ಲೆಯ ಸಕಲೇಶಪುರ (Sakleshpura) ತಾಲೂಕು ಯಸಳೂರು ಹೋಬಳಿ ಮಾಗೇರಿಯ ಸಮೀಪ ಕಲ್ಲಹಳ್ಳಿ ಗ್ರಾಮದಲ್ಲಿ ಜನವಸತಿ ಪ್ರದೇಶದಲ್ಲಿ ರಕ್ತಸಿಕ್ತವಾದ ಕಾರು ನಿಲ್ಲಿಸಿ ಮತ್ತೊಂದು ಕಾರಿನಲ್ಲಿ ಶನಿವಾರ ಬೆಳಗಿನ ಜಾವ ಪರಾರಿಯಾಗಿದ್ದ ಸಂಪತ್ ಮೃತದೇಹ ಪತ್ತೆ ಆಗಿದೆ. ಈ ಗ್ರಾಮಕ್ಕೆ ತೋಟದ ಕೆಲಸಕ್ಕೆ ಜನ ಕರೆತಂದ ಕಾರಿನ ಚಾಲಕ ಅಪರಿಚಿತ ಕಾರು ರಕ್ತಸಿಕ್ತ ಆಗಿರುವ ಮಾಹಿತಿಯನ್ನು ಗ್ರಾಮಸ್ಥರಿಗೆ ತಿಳಿಸಿದ್ದರು. ನಂತರ ಯಸಳೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಯಸಳೂರು ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದರು. ಇದನ್ನೂ ಓದಿ: ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ: ಹರೀಶ್ ಇಂಜಾಡಿ ಸ್ಪಷ್ಟನೆ
ತನಿಖೆಗಾಗಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸಹ ಸ್ಥಳಕ್ಕೆ ಬಂದು ಮಹಜರ್ ಮಾಡಿ ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಯ ತನಿಖೆ ಮುಂದುವರಿದಂತೆ ಈ ಕಾರು ಕೊಡಗಿನ ಕುಶಾಲನಗರದ ಉದ್ಯಮಿಯಾದ ಜಾನ್ ಅವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಜಾನ್ ಅವರ ಕಾರನ್ನು ಕುಶಾಲನಗರದಲ್ಲಿ ವಾಸವಿರುವ ಸೋಮವಾರಪೇಟೆ ತಾಲೂಕು ಕಕ್ಕೆ ಹೊಳೆ ಜಂಗ್ಸನ್ ನಿವಾಸಿ ಸಂಪತ್ (ಶಂಭು) ಶನಿವಾರ ತೆಗೆದು ಕೊಂಡು ಬಂದಿರುತ್ತಾರೆ ಎಂದು ತಿಳಿದು ಬಂದಿದೆ. ಆದರೆ ಇಲ್ಲಿಯ ತನಕ ಸಂಪತ್ ಮೊಬೈಲ್ ಸ್ವಿಚ್‌ಆಫ್ ಆಗಿದ್ದು ಯಾವುದೇ ಮಾಹಿತಿ ಲಭ್ಯ ವಾಗಿರಲಿಲ್ಲ. ಇದನ್ನೂ ಓದಿ: ಭದ್ರಾಪುರದಲ್ಲಿ ಹತ್ಯೆಯಾದ ಬಾಲಕಿ ಮನೆಗೆ ಡಿಕೆಶಿ ಭೇಟಿ – ಪರಿಹಾರ ಚೆಕ್ ವಿತರಣೆ
ಮೊಬೈಲ್‌ಗಳಲ್ಲಿ ಬಂದಿರುವ ಕೊನೆಯ ಕರೆಗಳ ಮಾಹಿತಿಗಳನ್ನು ಕಲೆ ಹಾಕಲಾಗಿತ್ತು. ಜೊತೆಗೆ ಈ ಹಿಂದೆ ನಡೆದ ಗಲಾಟೆ ಘರ್ಷಣೆಯ ಎದುರಾಳಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಇದರಲ್ಲಿ ಕೆಲವು ಜನರು ಊರು ಬಿಟ್ಟಿದ್ದು, ಇನ್ನೂ ಕೆಲವರು ವಿಚಾರಣೆಗೆ ಸಹಕರಿಸಿದ್ದಾರೆ. ಇನ್ನೂ ಕೆಲವರು ಪೋಲಿಸ್ ಕರೆಗಳನ್ನು ಉತ್ತರಿಸಿ ಫೋನ್ ಸ್ವಿಚ್‌ಆಫ್ ಮಾಡಿ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಡ್ರೋನ್‌ಗಳನ್ನು ಧ್ವಂಸ ಮಾಡೋ ಭಾರ್ಗವಾಸ್ತ್ರ ಪ್ರಯೋಗ ಯಶಸ್ವಿ!
ಯಸಳೂರು ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಮತ್ತು ಸಿಬ್ಬಂದಿ ವರ್ಗ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಈ ಪ್ರದೇಶದ ಸುತ್ತ ಮುತ್ತ ಹುಡುಕಾಟ ನಡೆಸಿದ ಬಳಿಕ ಮೃತದೇಹ ಪತ್ತೆ ಆಗಿದೆ. ಇದನ್ನೂ ಓದಿ: ಜಪಾನ್ ಕಾನ್ಸುಲ್ ಜನರಲ್ ಜೊತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚರ್ಚೆ
ಮಾಗೇರಿ ಗ್ರಾಮ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇದೆ. ಅವರ ತೋಟ, ಗದ್ದೆಗಳ ನಡುವೆ ಮನೆ ಕಟ್ಟಿಕೊಂಡು ವಾಸ ವಾಗಿದ್ದಾರೆ. ಪ್ರವಾಸಿ ತಾಣಗಳು ಇರುವುದರಿಂದ ಹಲವು ಹೋಮ್ ಸ್ಟೇಗಳು ತಲೆ ಎತ್ತಿವೆ. ಅಪರಿಚಿತ ಜನರು ಬರುವುದರಿಂದ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿರುವುದರಿಂದ ಗ್ರಾಮಸ್ಥರು ಭಯದ ವಾತಾವರಣದಲ್ಲಿ ಬದುಕಬೇಕಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ: ಸಿಎಂ ಕಿಡಿ
ಇನ್ನೂ ಸಂಪತ್ ಹೆಣ್ಣಿನ ಮೋಹದ ಬಲೆಗೆ ಸಿಲುಕಿ ಕೊಲೆಯಾಗಿರಬಹುದು ಎಂದು ಹೇಳಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಕೊಡಗು ಹಾಸನ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 31 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ