ಸಲ್ಮಾನ್ ಖಾನ್ ಮನೆ ಬಳಿ ಭದ್ರತಾ ಲೋಪ – ಮನೆಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ

Public TV
1 Min Read
salman khan 1 1

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮನೆಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಇಬ್ಬರನ್ನು ಮುಂಬೈ ಬಾಂದ್ರಾ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ:ಸೂರ್ಯ ನಟನೆಯ ಸಿನಿಮಾದಲ್ಲಿ ವಿಜಯ್ ದೇವರಕೊಂಡ?

Bollywood Salman Khanಸಲ್ಮಾನ್ ಖಾನ್ ಅಭಿಮಾನಿ ಎಂದು ನಟನ ಗ್ಯಾಲಕ್ಸಿ ಅಪಾರ್ಟ್ಮೆಂಟ್‌ಗೆ ಜೀತೇಂದ್ರ ಕುಮಾರ್ ಸಿಂಗ್ ಮತ್ತು ಇಶಾ ಚಾಬ್ರಾ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾರೆ. ಮೇ 19 ಇಶಾ ಚಾಬ್ರಾ ಮತ್ತು ಮೇ 20ರಂದು ಜೀತೇಂದ್ರ ಮನೆಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಬೆಳಗ್ಗೆಯಿಂದ ನಟನ ಮನೆಯ ಕಡೆ ಓಡಾಡಿಕೊಂಡಿದ್ದ ಜೀತೇಂದ್ರ, ಸಂಜೆ 7:15ಕ್ಕೆ ಮನೆಗೆ ನುಗ್ಗಲು ಯತ್ನಿಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

salman khanನಟನನ್ನು ಭೇಟಿಯಾಗಲು ಬಂದಿದ್ದೇನೆ ಎಂದಿದ್ದ ಜೀತೇಂದ್ರನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಮತ್ತೋರ್ವ ಮಹಿಳಾ ಅಭಿಮಾನಿ ಇಶಾ ಚಾಬ್ರಾರನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಸಿಸಿಟಿವಿಯಲ್ಲಿ ಆಕೆ ಮುಖ ಬಹಿರಂಗವಾಗಿದೆ. ಇದನ್ನೂ ಓದಿ:ರಾಧಿಕಾ ಪಂಡಿತ್‌ಗೆ ಸಿನಿಮಾ – ಯಶ್ ತಾಯಿ ಹೇಳೋದೇನು?

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇರುವ ಹಿನ್ನೆಲೆ ಎರಡು ಕೇಸ್‌ಗಳ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share This Article