ಕೊಪ್ಪಳ: ತಜ್ಞರ ವರದಿಯ ಆಧಾರದ ಮೇಲೆ ಟಿಬಿ ಡ್ಯಾಂ ಗೇಟ್‌ಗಳ (TB Dam) ನಿರ್ವಹಣೆ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಕೊಪ್ಪಳದ (Koppal) ಗಿಣಿಗೇರಾ ಏರ್ ಸ್ಟ್ರಿಪ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕ್ರಸ್ಟ್ ಗೇಟ್‌ಗಳನ್ನು ಕಾಲಕಾಲಕ್ಕೆ ದುರಸ್ತಿ ಮಾಡುವ ಬಗ್ಗೆ ಉತ್ತರಿಸಿದರು. 50 ವರ್ಷಕ್ಕೆ ಗೇಟ್‌ಗಳನ್ನು ಬದಲಿಸಬೇಕು. 70 ವರ್ಷಗಳಿಂದ ಗೇಟ್‌ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಉತ್ತಮ ನಿರ್ವಹಣೆ ಮಾಡಿರುವುದರಿಂದ 70 ವರ್ಷ ಕೆಲಸ ಮಾಡಿದೆ. ಪ್ರಸ್ತುತ ತಜ್ಞರ ಸಮಿತಿ ರಚನೆಯಾಗಿದ್ದು, ವರದಿ ನೀಡಬೇಕಿದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ರಾಜ್ಯಪಾಲರೇ ವಿರೋಧ ಪಕ್ಷದ ನಾಯಕನಂತೆ ನಡೆದುಕೊಳ್ಳುತ್ತಿದ್ದಾರೆ: ದಿನೇಶ್ ಗುಂಡೂರಾವ್
ಹಿಂಗಾರಿನ ಎರಡನೇ ಬೆಳೆಗೆ ನೀರು ಲಭ್ಯವಾಗಬಹುದು
ತುಂಗಭದ್ರಾ ಜಲಾಶಯ ಮತ್ತೆ ತುಂಬಿದೆ. 101.77 ಟಿಎಂಸಿ ನೀರು ಲಭ್ಯವಿದೆ. ಮುಂಗಾರು ಮತ್ತು ಹಿಂಗಾರು ಬಿತ್ತನೆಗೆ ನೀರು ಸಿಗಲಿದೆ. ಕೊಚ್ಚಿಹೋಗಿದ್ದ 19 ನೇ ಕ್ರಸ್ಟ್ ಗೇಟ್‌ನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್ ಅವರು ಸ್ಥಳದಲ್ಲಿಯೇ ಇದ್ದು ಗೇಟ್ ದುರಸ್ತಿಗೆ ಕ್ರಮ ವಹಿಸಿದರು. ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ, ಜಿಂದಾಲ್, ನಾರಾಯಣ್ ಇಂಜಿನಿಯರಿಂಗ್ ಹಾಗೂ ಇಂಜಿನಿಯರ್‌ಗಳು, ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಆದಷ್ಟು ತ್ವರಿತವಾಗಿ ಗೇಟ್ ಅಳವಡಿಸಲು ಸಾಧ್ಯವಾಯಿತು. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. 20 ಕ್ಕೂ ಹೆಚ್ಚು ಟಿಎಂಸಿ ನೀರು ಉಳಿಯಿತು. ಬೆಳೆಗೆ ನೀರು ಸಿಗುತ್ತದೋ ಇಲ್ಲವೋ ಎಂಬ ರೈತರ ಆತಂಕ ನಿವಾರಣೆಯಾಗಿದೆ. ಹಿಂಗಾರಿನ ಬೆಳೆಗೆ ಯಾವುದೇ ತೊಂದರೆ ಇಲ್ಲ. ಎರಡನೇ ಬೆಳೆಗೆ ನೀರು ಒದಗಿಸಲು ಪ್ರಯತ್ನಿಸಲಾಗುವುದು. 101 ಟಿಎಂಸಿ ಲಭ್ಯವಿರುವುದರಿಂದ ನೀರು ಲಭ್ಯವಾಗಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಸ್ತೆಗಳ ದುರಸ್ತಿ
ನಮ್ಮ ಸರ್ಕಾರವಿದ್ದಾಗ ರಸ್ತೆಗಳ ನಿರ್ಮಾಣ ಮಾಡಿದ್ದೇವೆ. ಬಿಜೆಪಿ ಕಾಲದಲ್ಲಿ ರಸ್ತೆಗಳಾಗಿಲ್ಲ. ಈ ವರ್ಷ ಉತ್ತಮ ಮಳೆಯಾಗಿರುವುದರಿಂದ ರಸ್ತೆಗಳು ಹಾಳಾಗಿವೆ. ಅದರ ದುರಸ್ತಿ ಮಾಡಿಸಲಾಗುವುದು ಎಂದರು. ಇದನ್ನೂ ಓದಿ: ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ