ಅಯೋಧ್ಯೆ: ಇಲ್ಲಿನ ರಾಮಮಂದಿರದಲ್ಲಿ (Ayodhya Ram Mandir) ಪೇಜಾವರ ಶ್ರೀಗಳ (Vishwaprasanna Teertha Sri) ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ (Mandalotsava) ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಭಾಗವಹಿಸಿದ್ದಾರೆ.
ಶ್ರೀ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಮಂಡಲೋತ್ಸವದ ಪ್ರಯುಕ್ತ ನಿತ್ಯ ನಡೆಯುತ್ತಿರುವ ಧಾರ್ಮಿಕ ವಿಧಿವಿಧಾನಗಳನ್ನು ವಿವರಿಸಿದರು. ಇದನ್ನೂ ಓದಿ: ಅಯೋಧ್ಯೆಗೆ ಮೊದಲ ದಿನದ ಆನ್ಲೈನ್ ಕಾಣಿಕೆ 3.17 ಕೋಟಿ
Advertisement
Advertisement
ಇಂದು ನಡೆದ ಹೋಮ ಹವನ, ಕಲಶಾರಾಧನೆ, ಕಲಶಾಭಿಷೇಕದ ರಜತ ಕುಂಭ ಪ್ರಸಾದ ನೀಡಿ ಶುಭ ಹಾರೈಸಿದರು. ಈ ವೇಳೆ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ವಿಶ್ವ ಹಿಂದೂ ಪರಿಷತ್ ಮುಖಂಡ ಗೋಪಾಲ್ ಜಿ, ಶ್ರೀರಾಮನ ಅರ್ಚಕರು ಉಪಸ್ಥಿತರಿದ್ದರು.
Advertisement
Advertisement
ರಾಮಮಂದಿರದಲ್ಲಿ ಈ ತಿಂಗಳ ಜ.22 ರಂದು ಬಾಲಕರಾಮನ ವಿಗ್ರಹದ ಪ್ರಾಣಪ್ರತಿಷ್ಠೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನೆರವೇರಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ದೇಶ-ವಿದೇಶಗಳ ಸಾವಿರಾರು ಗಣ್ಯರು ಭಾಗಿಯಾಗಿದ್ದರು. ಇದನ್ನೂ ಓದಿ: ರಾಮಮಂದಿರ ಗರ್ಭಗುಡಿ ಸೇರಲು ಸ್ಪರ್ಧೆಯಲ್ಲಿದ್ದ 3ನೇ ರಾಮಲಲ್ಲಾ ವಿಗ್ರಹದ ಫೋಟೋ ವೈರಲ್