ಮಂಡ್ಯ: ಪಾದಾಚಾರಿಗಳ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ 4 ಮಂದಿ ಸಾವನ್ನಪ್ಪಿದ್ದು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಆಸ್ಪತ್ರೆಗೆ ಭೇಟಿ ನೀಡಿ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಮಂಡ್ಯ ನಗರದ ಗುತ್ತಲು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯ ಪಾದಾಚಾರಿಗಳ ಮೇಲೆ ಹರಿದಿದ್ದು, ಏಳು ಮಂದಿ ಸಾವನ್ನಪ್ಪಿದ್ದರು. ಕಾಂಗ್ರೆಸ್ ಮುಖಂಡ, ಅಂಬರೀಶ್ ಅಭಿಮಾನಿ ರಫಿಕ್ (59), ಗಿರಿಜಮ್ಮ (45), ಶಶಾಂಕ್(18) ರಾಹುಲ್(18) ಸಾವನ್ನಪ್ಪಿದ್ದು, ನಟರಾಜ್, ಕೋಕಿಲ, ಪ್ರಸನ್ನ, ರಿಜ್ವಾನ್, ಸಯ್ಯದ್ ನ್ಯಾಮಕ್, ಜಮೀಲ್ ಖಾನ್, ವಿನಯ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement
Advertisement
ಅಪಘಾತದಲ್ಲಿ ಗಾಯಗೊಂಡವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತು ಮಾಹಿತಿ ಪಡೆದು ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಪುಟ್ಟರಾಜು ಅವರು ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದರು. ಬಳಿಕ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಇದಕ್ಕೂ ಮುನ್ನ ಎಸ್‍ಪಿ ಶಿವಪ್ರಕಾಶ್ ದೇವರಾಜ್ ಭೇಟಿ ನೀಡಿದ್ದರು. ಇದನ್ನೂ ಓದಿ: ಮಂಡ್ಯದಲ್ಲಿ ಲಾರಿ ಹರಿದು ಐವರು ಪಾದಚಾರಿಗಳ ದಾರುಣ ಸಾವು
Advertisement
Advertisement
ಆಂಧ್ರ ನೊಂದಣಿಯ ಎಡಿ -0577 ನಂಬರ್‍ನ ಲಾರಿ ಚಾಲಕ ಡ್ರೈವರ್ ನದೀಮ್(24)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಪರಿಹಾರ ಘೋಷಣೆ ಮಾಡಲಾಗಿದೆ. ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣವಾಗಿದ್ದು, ತನಿಖೆ ನಂತರ ಪೂರ್ಣ ವಿವರ ತಿಳಿಯಲಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ ಎಂದು ಸಚಿವ ಪುಟ್ಟರಾಜು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv