ಮಂಡ್ಯ: ಪಾಂಡವಪುರ (Pandavapura) ತಾಲೂಕಿನ ಆರತಿ ಉಕ್ಕಡ ಅಹಲ್ಯದೇವಿ (Aarathi Ukkada) ದೇವಸ್ಥಾನಕ್ಕೆ ನಟ ದರ್ಶನ್ (Actor Darshan) ಭೇಟಿ ನೀಡಿದ್ದಾರೆ.
ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ, ನಟ ಧನ್ವೀರ್ ಜೊತೆ ದರ್ಶನ್ ಅಹಲ್ಯದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಂಕಷ್ಟ ಪರಿಹಾರಕ್ಕೆ ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಇದನ್ನೂ ಓದಿ: ಮಂಡ್ಯ| ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ಸಾವು
Advertisement
Advertisement
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ಡಿ.13 ರಂದು ಜಾಮೀನು ಮಂಜೂರು ಮಾಡಿತ್ತು. ಜೊತೆಗೆ ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು ಬಿಟ್ಟು ಹೋಗುವಂತಿಲ್ಲ. ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು.
Advertisement
ಇತ್ತೀಚಿಗಷ್ಟೇ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಜ.12ರಿಂದ 17ರವರೆಗೆ ಮೈಸೂರಿಗೆ ತೆರಳಲು ಅನುಮತಿ ಕೋರಿದ್ದ ದರ್ಶನ್‌ಗೆ ಕೋರ್ಟ್ ಅನುಮತಿ ನೀಡಿತ್ತು. ಕಳೆದ ಒಂದು ದಿನದ ಹಿಂದೆಯಷ್ಟೇ ನಟ ದರ್ಶನ್ ಕುಟುಂಬದೊಂದಿಗೆ ಮೈಸೂರಿನ ಫಾರಂಹೌಸ್‌ನಲ್ಲಿ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದರು.ಇದನ್ನೂ ಓದಿ: ಶಿವಣ್ಣಗೆ 6 ಆಪರೇಷನ್, 190 ಹೊಲಿಗೆ ಹಾಕಲಾಗಿದೆ: ಮಧು ಬಂಗಾರಪ್ಪ
Advertisement