ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಡಿಯೋ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಗ್ರಹಗತಿಗಳ ಶಾಂತಿಗಾಗಿ ಮಂಡ್ಯದ ಬಿಜೆಪಿ ಕಾರ್ಯಕರ್ತರು ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಗರದ ಶಕ್ತಿ ದೇವತೆ ಕಾಳಿಕಾಂಬ ದೇವಾಲಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರಲ್ಲಿ ಅರ್ಚನೆ ಮಾಡಿಸಿದ ಕಾರ್ಯಕರ್ತರು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಷ್ಟ ದಿಕ್ಕಿನಲ್ಲೂ ತಡೆ ಒಡೆದು ಗ್ರಹಗತಿಗಳಿಗೆ ಶಾಂತಿ ಮಾಡಿಸಿದರು. ಇದನ್ನು ಓದು: ಸಿದ್ದರಾಮಯ್ಯ ಒತ್ತಡಕ್ಕೆ ಮಣಿದ ಸಿಎಂ ಎಚ್‍ಡಿಕೆ!
ಹಾಸನದ ಮೂರು ಗ್ರಹಗಳಾದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಇಬ್ಬರು ಮಕ್ಕಳಾದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಿಎಂ ಕುಮಾರಸ್ವಾಮಿ, ಕನಕಪುರದ ಎರಡು ಗ್ರಹಗಳಾದ ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಮೈಸೂರಿನ ಒಂದು ಗ್ರಹ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಂತಿ ಪೂಜೆ ಮಾಡಿಸಲಾಗಿದೆ ಎಂದು ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ. ಇದನ್ನು ಓದು: ಹುಡುಗಾಟಿಕೆ ಆಡ್ಬಿಟ್ರಿ ನೀವು- ಬಿಎಸ್‍ವೈ ಆಡಿಯೋಗೆ ಹೈಕಮಾಂಡ್ ಕೆಂಡಾಮಂಡಲ
ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ಆಪರೇಷನ್ ಕಮಲ ಆಡಿಯೋ ಪ್ರಕರಣದಿಂದ ಮುಕ್ತವಾಗಲಿ ಹಾಗೂ ಅವರು ಶೀಘ್ರದಲ್ಲಿ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಕಾರ್ಯಕರ್ತರು ಪ್ರಾರ್ಥಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv