ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಘಟನೆ ಬಗ್ಗೆ ಮಾಹಿತಿ ಪಡೆದು ಇಂದಿನ ಅವರ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಗೊಳಿಸಿ ಬಸ್ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ ಅವರು ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಸ್ಥಳಕ್ಕೆ ಆಗಮಿಸಿ ಮೃತ ದೇಹಗಳನ್ನು ನೋಡುತ್ತಿದ್ದಂತೆ ಸಿಎಂ ಕಣ್ಣೀರು ಹಾಕಿದ್ದು, ನಿಮ್ಮೊಂದಿಗೆ ನಾನಿದ್ದೇನೆ, ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಡಿ ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದರು.
ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ನಾಯಕರು ಸಂತಾಪ ಸೂಚಿಸಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಶಾಸಕ ರವೀಂದ್ರ ಶ್ರೀಕಂಠಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟಸ್ವಾಮಿ ಸೇರಿದಂತೆ ಹಲವು ನಾಯಕರು ಆಗಮಿಸಿ ನೊಂದ ಕುಟುಂಬಗಳಿಗೆ ಸಾಂತ್ವನ ಹೇಳುವ ಕಾರ್ಯ ಮಾಡಿದರು. ಅಲ್ಲದೇ ಮೃತ ದೇಹಗಳನ್ನ ಗುರುತಿಸುವ ಕಾರ್ಯ ಸೇರಿದಂತೆ, ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸುವ ಬಗ್ಗೆ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಬಸ್ ದುರಂತ ಸಂಭವಿಸಿದ ಪಾಂಡವಪುರ ತಾಲ್ಲೂಕು ಕನಗನಮರಡಿ ಗ್ರಾಮಕ್ಕೆ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿಕೊಟ್ಟರು.
ಈ ದುರ್ಘಟನೆಯಿಂದ ನನ್ನ ಮನಸ್ಸಿಗೆ ತೀವ್ರ ದುಃಖವಾಗಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ರೂ 5ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದರು. #Mandya pic.twitter.com/ad4CQHPkXi
— CM of Karnataka (@CMofKarnataka) November 24, 2018
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸಲು ದೇವರು ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕಾದ ರವಿಂದ್ರ ಶ್ರೀಕಂಠಯ್ಯ ಹಾಜರಿದ್ದರು.
— CM of Karnataka (@CMofKarnataka) November 24, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv