ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿ ಸಮೀಪದ ಗುಡಿಕೆರೆ ಕಾಲೋನಿಯ ಯೋಧ ಗುರು ಎಚ್(33) ಹುತಾತ್ಮರಾಗಿದ್ದು, ಜಿಲ್ಲಾಧಿಕಾರಿ ಎನ್ ಮಂಜುಶ್ರೀ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರು ಕುಟುಂಬಕ್ಕೆ ಜಿಲ್ಲಾಡಳಿತದಿಂದ ಯಾವುದೇ ರೀತಿಯ ನೆರವಿಗೆ ಸಿದ್ಧವಿದೆ. ಕುಟುಂಬಸ್ಥರು ಧೈರ್ಯವಾಗಿರಬೇಕು ಹಾಗೆಯೇ ಹೆಚಚ್ಚಿನ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿಕೊಂಡರು.
- Advertisement
ಮೃತರ ಶರೀರ ಇಂದು ಅಥವಾ ನಾಳೆ ಸ್ವ-ಗ್ರಾಮಕ್ಕೆ ವಾಪಸ್ಸಾಗಲಿದೆ. ಆದ್ರೆ ಇನ್ನೂ ನಾವು ಅಧಿಕೃತ ಮಾಹಿತಿಗಾಗಿ ಕಾಯುತ್ತಿದ್ದೇವೆ. ಅದು ಬಂದ ನಂತರ ಇದೇ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸುವುದಾಗಿ ಅವರು ಹೇಳಿದರು.
- Advertisement
ಈಗಾಗಲೇ ನಾನು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅಂತ್ಯಕ್ರಿಯೆಗಾಗಿ ತಾಲೂಕು ಆಡಳಿತದಿಂದ ಎರಡು ಜಾಗವನ್ನು ಗುರುತಿಸಿದ್ದೇವೆ. ಎರಡರಲ್ಲಿ ಯಾವುದು ಸೂಕ್ತ ಎನ್ನುವುದನ್ನು ನೋಡಿ ಅಂತಿಮ ಮಾಡುತ್ತೇವೆ. ಗುರು ಹುತಾತ್ಮರಾದ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದ್ರೆ ದೆಹಲಿಯಲ್ಲಿರುವ ಸಿಆರ್ ಪಿ ಎಫ್ ಕಚೇರಿಗೆ ಕರೆ ಮಾಡಿ ಕೇಳಿದಾಗ ಸಾವಾಗಿರುವುದು ನಿಶ್ಚಿತ ಎಂಬ ಮಾಹಿತಿ ಲಭಿಸಿದೆ ಎಂದು ಅವರು ತಿಳಿಸಿದ್ರು.
ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಅದಿಲ್ ದರ್ ಎಂಬ ಉಗ್ರ ಸ್ಕಾರ್ಪಿಯೋ ಕಾರಿನಲ್ಲಿ ಸ್ಫೋಟಕ ತುಂಬಿ ಆತ್ಮಾಹುತಿ ದಾಳಿ ಮಾಡಿದ್ದನು. ಈ ದಾಳಿಯಲ್ಲಿ ಇದೂವರೆಗೆ 44 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ.
https://www.youtube.com/watch?v=Cagqto-A9E0
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv