ಮಂಡ್ಯ: ಜಿಲ್ಲೆಯಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು (87th All India Literary Conference) ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರಿ ನೌಕರರು ಒಂದು ದಿನದ ವೇತನವನ್ನು ನೀಡುವಂತೆ ಮಂಡ್ಯ ಜಿಲ್ಲಾಧಿಕಾರಿ (Mandya DC) ಡಾ.ಕುಮಾರ ಅವರು ಮನವಿ ಮಾಡಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಭೆ ನಡೆಸಿ ಮಾತನಾಡಿದ ಅವರು, ಒಂದು ದಿನದ ಸಂಬಳ ನೀಡುವ ಬಗ್ಗೆ ಜಿಲ್ಲಾಡಳಿತದಿಂದ ಯಾವುದೇ ಒತ್ತಾಯವಿಲ್ಲ. ಎಲ್ಲಾ ಅಧಿಕಾರಿಗಳು (Government Employees) ಹಾಗೂ ಸಿಬ್ಬಂದಿ ಪ್ರೀತಿಪೂರ್ವಕವಾಗಿ ನೀಡುವಂತೆ ಕೋರಿದರು. ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಮನೆ ಮೇಲೆ ಲೋಕಾ ದಾಳಿ; 14.80 ಲಕ್ಷ ಹಣ ಜಪ್ತಿ!
- Advertisement -
- Advertisement -
87ನೇ ಅಖಿಲ ಭಾರತ ಕನ್ನಡ ಸಾಹಿತ್ಯವು ಡಿಸೆಂಬರ್ 20, 21, 22 ರಂದು ಜಿಲ್ಲೆಯಲ್ಲಿ ನಡೆಯಲಿದೆ. ಸರ್ಕಾರಿ ನೌಕರರಲ್ಲೇ ವಿವಿಧ ಸಂಘ ಸಂಸ್ಥೆಗಳು, ಕನ್ನಡ ಪರ ಹೋರಾಟ ಸಂಘಗಳು ಹಾಗೂ ಸಾರ್ವಜನಿಕರು ಮನಪೂರ್ವಕವಾಗಿ ತಮ್ಮ ಇಚ್ಛೆಯಿಂದ ಸಮ್ಮೇಳನಕ್ಕೆ ಸಹಾಯ ಮಾಡಬಹುದು. ಜಿಲ್ಲೆಯ ಕನ್ನಡಿಗರು ಸಮ್ಮೇಳನದಲ್ಲಿ ಒಬ್ಬ ಕನ್ನಡಿಗನಾಗಿ ಸೇವೆ ಮಾಡಬಹುದಾಗಿದ್ದು, ಈ ಬಗ್ಗೆ ಯಾವುದೇ ಒತ್ತಾಯವಿರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಕೇಸ್- ಸೈಲ್‌ಗೆ ರಿಲೀಫ್, ಶಿಕ್ಷೆಯನ್ನು ಅಮಾನತಿನಲ್ಲಿಟ್ಟ ಹೈಕೋರ್ಟ್
- Advertisement -
ಸಭೆಯಲ್ಲಿ ಪ್ರತಿಯೊಬ್ಬರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತೋಷದ ವಿಷಯವಾಗಿದೆ. ಸಮ್ಮೇಳನವು ಕೇವಲ ವೈಯಕ್ತಿಕ ಹಬ್ಬವಾಗಿರದೇ, ಕನ್ನಡದ ಐಕ್ಯತೆಯನ್ನು ಸಾರುವ, ಪ್ರತಿಬಿಂಬಿಸುವ ಪ್ರತಿಯೊಬ್ಬ ಕನ್ನಡಿಗರ ಮನೆಯ ಹಬ್ಬವಾಗಿದೆ. ಸಾರ್ವಜನಿಕರು, ಎಲ್ಲಾ ಸರ್ಕಾರಿ ನೌಕರರು ಕೂಡ ತಮ್ಮ ಮನೆಯ ಹಬ್ಬವೆಂದು ಭಾವಿಸಿ ಸಂಭ್ರಮ, ಸಡಗರದಿಂದ ಆಚರಿಸೋಣ ಎಂದು ಕರೆ ನೀಡಿದರು.
- Advertisement -
ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಲ್ಲಿ ವಿವಿಧ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ 10 ಮಂದಿ ಕನ್ನಡಿಗರಿಗೆ ಸನ್ಮಾನ ಮಾಡುವ ಬಗ್ಗೆ ಹಾಗೂ ಸಮ್ಮೇಳನ ನಡೆಯುವ ದಿನಗಳಂದು ರಜೆ ನೀಡುವ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ವಿದ್ಯಾರ್ಥಿಗಳ ಪೋಷಕರೊಂದಿಗೆ ಅನುಚಿತ ವರ್ತನೆ, ಹಣ ದುರುಪಯೋಗ – ಇಬ್ಬರು ಶಿಕ್ಷಕರು ಅಮಾನತು