ಮಂಡ್ಯ: ಜಿಲ್ಲೆಯಲ್ಲಿ ಚಿರತೆ (Leopard) ಹಾವಳಿ ಮಿತಿ ಮೀರಿದ್ದು ಜನರನ್ನು ಆತಂಕಕ್ಕೀಡುಮಾಡಿದೆ. ಕೊಟ್ಟಿಗೆಯಲ್ಲಿದ್ದ ಕುರಿಗಳ ಹಿಂಡಿನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಅಗಸನಪುರ ಗ್ರಾಮದಲ್ಲಿ ನಡೆದಿದೆ.
ಚಿರತೆ ದಾಳಿಯಿಂದ ಅಗಸನಪುರ ನಿವಾಸಿ ರತ್ನಮ್ಮ ಎಂಬುವವರಿಗೆ ಸೇರಿದ್ದ ನಾಲ್ಕು ಕುರಿಗಳು ಸಾವನ್ನಪ್ಪಿವೆ. ಜಿಲ್ಲೆಯ ಹಲವೆಡೆ ಚಿರತೆ ಹಾವಳಿಗೆ ಕಂಗಾಲಾಗಿರುವ ರೈತರು, ಕೂಡಲೇ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅಮೆರಿಕ ನಿರ್ಮಿತ ದೀರ್ಘ ಶ್ರೇಣಿಯ ಕ್ಷಿಪಣಿಗಳಿಂದ ರಷ್ಯಾ ಮೇಲೆ ಉಕ್ರೇನ್ ದಾಳಿ
ಕಳೆದ ಎರಡು ದಿನಗಳ ಹಿಂದೆಯಷ್ಟೇ ನೆಲಮಂಗಲ (Nelamangala) ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಚಿರತೆ ಮಹಿಳೆಯ ಮೇಲೆ ದಾಳಿ ಮಾಡಿದ ಘಟನೆ ನಡೆದಿತ್ತು. ಇದನ್ನೂ ಓದಿ: Nelamangala| ಚಿರತೆ ದಾಳಿ- ಮಹಿಳೆ ಬಲಿ