ಮಂಡ್ಯ: ಬೆಳ್ಳಂಬೆಳಗ್ಗೆ ಆನೆಗಳ ಹಿಂಡು ಪ್ರತ್ಯಕ್ಷವಾಗಿರುವುದನ್ನು ಕಂಡು ಗ್ರಾಮಸ್ಥರು ಆತಂಕಕ್ಕೀಡಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿಯಲ್ಲಿ ಆನೆಗಳ ಹಿಂಡು ಪ್ರತ್ಯಕ್ಷವಾಗಿ ಅನೇಕ ದಾಂಧಲೆಯನ್ನು ನಡೆಸಿವೆ. ಇದನ್ನು ಕಂಡು ರೈತರು ಭಯಗೊಂಡಿದ್ದಾರೆ.
ಕಬ್ಬು, ಬಾಳೆ ಸೇರಿದಂತೆ ಇತರೆ ಬೆಳೆಗಳನ್ನು ಆನೆ ಹಿಂಡು ನಾಶ ಮಾಡಿದೆ. ಆನೆ ಹಿಂಡನ್ನು ಓಡಿಸಲು ರೈತರು ಹರಸಾಹಸ ಮಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಆದರೂ ತುಂಬಾ ಸಮಯದವರೆಗೆ ಆನೆಗಳ ಹಿಂಡು ರೈತರು ಬೆಳೆದ ಬೆಳೆಗಳ ಮೇಲೆ ದಾಳಿ ನಡೆಸಿವೆ. ಇದನ್ನೂ ಓದಿ: ತಮಿಳುನಾಡಲ್ಲಿ ಸರ್ಕಾರಿ ನೌಕರಿಗೆ ತಮಿಳು ಕಡ್ಡಾಯ
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನೆ ದಾಳಿಯಿಂದ ಕಷ್ಟಪಟ್ಟು ಬೆಳೆದ ಬೆಳೆಗಳಲ್ಲಾ ನಾಶವಾಗಿದೆ. ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಮನುಷ್ಯರಿಂದ ಪ್ರಾಣಿಗಳಿಗೆ ಹರಡುತ್ತದೆ – ಸಂಶೋಧನಾ ವರದಿ