ಮಂಡ್ಯ: ಕೊರೊನಾ ಲಾಕ್ ಡೌನ್ ಹಿನ್ನೆಲೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆಹಾರಕ್ಕಾಗಿ ಪರದಾಡುತ್ತಿದ್ದ ಜನರಿಗೆ ಆಹಾರ ಪದಾರ್ಥಗಳನ್ನು ನೀಡುವ ಮೂಲಕ ಸಮಾಜ ಸೇವಕ ರೇವಣ್ಣ ಪಬ್ಲಿಕ್ ಚಾಲೆಂಜ್ ಸ್ವೀಕಾರ ಮಾಡಿದ್ದಾರೆ.
ಕೊರೊನಾ ಎಫೆಕ್ಟ್ ನಿಂದ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಹೀಗಾಗಿ ಬಡವರು ದಿನನಿತ್ಯದ ಆಹಾರ ಪದಾರ್ಥಗಳಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಪಬ್ಲಿಕ್ ಟಿವಿ ಜನರಿಗೆ ಆಹಾರ ಪದಾರ್ಥಗಳ ವಿತರಣೆ ಚಾಲೆಂಜ್‍ನ್ನು ರಾಜಕಾರಣಿಗಳಿಗೆ ಹಾಗೂ ಸಮಾಜ ಸೇವಕರಿಗೆ ಹಾಕಲಾಗಿತ್ತು. ಹೀಗಾಗಿ ಸಮಾಜ ಸೇವಕ ರೇವಣ್ಣ ಪಬ್ಲಿಕ್ ಚಾಲೆಂಜ್ ಸ್ವೀಕರಿಸಿ ಪಾಂಡವಪುರದ ಬಡವರಿಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡಿದ್ದಾರೆ.
Advertisement
Advertisement
50 ಸಾವಿರ ಮಾಸ್ಕ್, 25 ಸಾವಿರ ಸ್ಯಾನಿಟೇಜರ್, 200 ಕುಟುಂಬಗಳಿಗೆ ತಲಾ 10 ಕೆಜಿ ಅಕ್ಕಿ, 2 ಕೆಜಿ ಬೇಳೆ, 2 ಲೀಟರ್ ಅಡುಗೆ ಎಣ್ಣೆ ಹಾಗೂ ಇತರ ಅಡುಗೆ ಸಾಮಗ್ರಿಗಳನ್ನು ತಾಲೂಕು ಆಡಳಿತದ ಮೂಲಕ ವಿತರಣೆ ಮಾಡಿದ್ದಾರೆ.