ಬೆಂಗಳೂರು: ಮಾಜಿ ಸಂಸದೆ ರಮ್ಯಾ ವಿರುದ್ಧ ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಈ ಕುರಿತು ರಮ್ಯಾ ಟ್ವೀಟ್ ಅವರು ತನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಅಂತ ಹೇಳಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ನಲ್ಲೇನಿತ್ತು?:
ನಿಮ್ಮ ಬೆಂಬಲವನ್ನು ಮತ್ತಷ್ಟು ಹೆಚ್ಚಿಸಿದ್ದಕ್ಕೆ ನಿಮಗೆ ಧನ್ಯವಾದಗಳು. ಹಾಗೆಯೇ ಯಾರು ನನ್ನ ಟ್ವೀಟ್‍ಗಳನ್ನು ಇಷ್ಟ ಪಡುವುದಿಲ್ಲವೋ ಅವರಿಗೆ ನಾನೇನೂ ಹೇಳೋದಿಕ್ಕೆ ಆಗಲ್ಲ. ಇನ್ನು ಮುಂದಕ್ಕೆ ಇದನ್ನು ಮತ್ತಷ್ಟೂ ಕ್ಲಾಸಿಯಾಗಿ ತೆಗೆದುಕೊಳ್ಳೋಣ.
Advertisement
ಕಾನೂನಿನಿಗೆ ಸಂಬಂಧಿಸಿದಂತೆ ಭಾರತ ದ್ರೋಹ ಮಾಡುತ್ತಿದೆ. ಇದು ಬಹಳ ಪುರಾತನವಾಗಿದ್ದು, ದುರ್ಬಳಕೆಯಾಗುತ್ತಿದೆ ಅಂತ ತನ್ನ ವಿರುದ್ಧ ಎಫ್‍ಐಆರ್ ಹಾಕಿರೋರಿಗೆ ರಮ್ಯಾ ಟಾಂಗ್ ನೀಡಿದ್ದಾರೆ.
Advertisement
Thank you guys for extending your support and for those who didn’t like the tweet, well, what can I say? Will keep it ‘classy’ next time ????
India should do away with the sedition law, it’s archaic and misused.
To the folks who filed the FIR- #PMChorHai ????????
— Ramya/Divya Spandana (@divyaspandana) September 26, 2018
Advertisement
ಎಫ್‍ಐಆರ್ ದಾಖಲಾಗಿದ್ದು ಯಾಕೆ?:
ರಫೇಲ್ ಒಪ್ಪಂದಕ್ಕೆ ಸಂಬಂಧಪಟ್ಟಂತೆ ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿ, ಅಪೇಕ್ಷರ್ಹ ಫೋಟೋವನ್ನು ಟ್ವೀಟ್ ಮಾಡಿದ್ದಕ್ಕೆ ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಲಕ್ನೋ ಮೂಲ ವಕೀಲರಾದ ಸೈಯದ್ ರಿಜ್ವಾನ್ ಅಹ್ಮದ್ ಮಂಗಳವಾರ ಗೌಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸದ್ಯ ರಮ್ಯಾ ಅವರ ವಿರುದ್ಧ ಐಪಿಸಿ ಸೆಕ್ಷನ್ 67 (ಮಾಹಿತಿ ತಂತ್ರಜ್ಞಾನದ ಕಾಯ್ದೆ), 2008 ಮತ್ತು ಸೆಕ್ಷನ್ 124ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement
ರಫೇಲ್ ಒಪ್ಪಂದ ಕುರಿತು ರಮ್ಯಾ ಸೆಪ್ಟೆಂಬರ್ 24 ರಂದು ಮೋದಿ ಅವರ ಮೇಣದ ಪ್ರತಿಮೆಯ ಫೋಟೋ ಟ್ವೀಟ್ ಮಾಡಿದ್ದರು. ಈ ಫೋಟೋದಲ್ಲಿ ಮೋದಿ ಸ್ವತಃ ತಮ್ಮ ಪ್ರತಿಮೆ ಮೇಲೆ ಕಳ್ಳ ಎಂದು ಬರೆಯುವಂತೆ ಚಿತ್ರಿಸಲಾಗಿದೆ. ಈ ಫೋಟೋಗೆ ಕಳ್ಳ ಪ್ರಧಾನಿ ಸುಮ್ಮನಿದ್ದಾರೆ (#ChorPMChupHai) ಎಂಬ ಹ್ಯಾಷ್ ಟ್ಯಾಗನ್ನು ರಮ್ಯಾ ಬಳಸಿ ಟ್ವೀಟ್ ಮಾಡಿದ್ದರು. ರಮ್ಯಾ ಮಾಡಿದ ಟ್ವೀಟ್ ನಲ್ಲಿ ನರೇಂದ್ರ ಮೋದಿ ವಿರುದ್ಧ ದ್ವೇಷ ಕಾರುವ ಅಂಶವಿದೆ ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಿಜ್ವಾನ್ ಅಹ್ಮದ್ ದೂರು ನೀಡಿದ್ದರು.
#ChorPMChupHai pic.twitter.com/Bahu5gmHbn
— Ramya/Divya Spandana (@divyaspandana) September 24, 2018
ರಾಹುಲ್ ಆರೋಪವೇನು?
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ರಫೇಲ್ ಒಪ್ಪಂದ ಕುರಿತು ಮೋದಿ ಸರ್ಕಾರದ ವಿರುದ್ಧ ಅರೋಪಗಳ ಸುರಿಮಳೆ ಮಾಡಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ 2012ರಲ್ಲಿ ಫ್ರಾನ್ಸ್’ನ ಡಸಾಲ್ಟ್ ಏವಿಯೇಶನ್ ಸಂಸ್ಥೆಯೊಂದಿಗೆ 126 ಮಧ್ಯಮ ಶ್ರೇಣಿಯ ಬಹುಮುಖಿ ಯುದ್ಧ ವಿಮಾನಗಳ (ಎಂಎಂಆರ್’ಸಿಎ-ಮೀಡಿಯಂ ಮಲ್ಟಿ ರೋಲ್ ಕಾಂಬಾಟ್ ಏರ್’ಕ್ರಾಫ್ಟ್) ಖರೀದಿಗೆ ಒಪ್ಪಂದ ಮಾಡಿಕೊಟ್ಟಿತ್ತು. ಮಾತುಕತೆಯ ನಿಯಮಗಳ ಪ್ರಕಾರ ಡಸಾಲ್ಟ್ ಏವಿಯೇಶನ್ ಸಂಸ್ಥೆಯು 18 ರಫೇಲ್ ಜೆಟ್‍ಗಳನ್ನು ಹಾರಾಡಲು ಸನ್ನದ್ಧವಾಗಿರುವ ಸ್ಥಿತಿಯಲ್ಲಿ ಭಾರತಕ್ಕೆ ಪೂರೈಸಬೇಕು ಹಾಗೂ ಭಾರತದ ಎಚ್‍ಎಎಲ್‍ನೊಂದಿಗೆ ಉಳಿದ 108 ಯುದ್ಧ ವಿಮಾನಗಳನ್ನು ಭಾರತದಲ್ಲಿಯೇ ತಯಾರಿಸಬೇಕೆನ್ನುವ ಷರತ್ತನ್ನು ಹಾಕಿತ್ತು ಎಂದು ರಾಹುಲ್ ಆರೋಪಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv