ಮಂಡ್ಯ: 3ನೇ ಬಾರಿಗೆ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (87th Kannada Sahitya Sammelana) ಇತಿಹಾಸ ಸೃಷ್ಟಿಸಲಿದೆ. ಹಲವು ಹೊಸತನಗಳಿಗೆ ಸಾಕ್ಷಿಯಾಗುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ಅವರು ಹೇಳಿದ್ದಾರೆ
ಮಂಡ್ಯ (Mandya) ನಗರದ ಹೊರವಲಯದಲ್ಲಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದಲ್ಲಿ ನಿರ್ಮಿಸುತ್ತಿರುವ ವೇದಿಕೆಗಳ ಸಿದ್ಧತಾ ಕಾರ್ಯಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು. ಇದನ್ನೂ ಓದಿ: ವಕ್ಫ್ ವಿಚಾರದಲ್ಲಿ ರಕ್ಷಿಸಲು ಕಾಂಗ್ರೆಸ್ ನಾಯಕರು ವಿಜಯೇಂದ್ರ ಸಂಬಂಧಿಗಳೇ?: ಎಂಪಿ ರೇಣುಕಾಚಾರ್ಯ
Advertisement
Advertisement
70-80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ, ಎರಡು ಸಮಾನಾಂತರ ವೇದಿಕೆ, 60 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. 55 ವಸ್ತುಪ್ರದರ್ಶನ ಮಳಿಗೆಗಳು, 350 ವಾಣಿಜ್ಯ ಮಳಿಗೆಗಳು, 450 ಪುಸ್ತಕ ಮಳಿಗೆಗಳು ಕೂಡ ತಲೆ ಎತ್ತಿವೆ. ಊಟಕ್ಕೆ 100 ಕೌಂಟರ್, ನೋಂದಾಯಿತ ಪ್ರತಿನಿಧಿಗಳಿಗೆ 40 ಕೌಂಟರ್‌ಗಳನ್ನ ತೆರೆಯಲಾಗಿದ್ದು ಎಲ್ಲರಿಗೂ ಒಂದೇ ಊಟದ ಮೆನು ಇರಲಿದೆ ಎಂದು ಮಾಹಿತಿ ನೀಡಿದರು.
Advertisement
ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಹಾರದ ಗುಣಮಟ್ಟ ಪರೀಕ್ಷೆ ಮಾಡಿ ವರದಿ ಪಡೆಯಲಾಗುತ್ತದೆ. ನೀರನ್ನು ಸಹ ಪರೀಕ್ಷಿಸಲಾಗುತ್ತದೆ. ಸ್ವಚ್ಛತೆಗೆ 250 ಸಿಬ್ಬಂದಿಯನ್ನ ನೇಮಿಸಲಾಗಿದೆ. 150ಕ್ಕೂ ಹೆಚ್ಚು ವಿವಿಧ ಸ್ಥಳಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ. 6,000 ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರೆಶ್, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್‌ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
Advertisement
7 ತಾಲೂಕು ಕೇಂದ್ರಗಳಿಂದ ಉಚಿತ ಬಸ್ ವ್ಯವಸ್ಥೆ:
ಸಮ್ಮೇಳನಕ್ಕೆ ಆಗಮಿಸುವ 7 ತಾಲೂಕು ಕೇಂದ್ರಗಳಿಂದ 15 ಉಚಿತ ಬಸ್ (Free Bus) ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಮಂಡ್ಯ ನಗರದಿಂದ ಕೂಡ ಬಸ್‌ಗಳು ಸಮ್ಮೇಳನದ ಸ್ಥಳಕ್ಕೆ ಉಚಿತವಾಗಿ ಕರೆತರಲಿವೆ. ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಸ್ಥಳದಿಂದ ಕೂಡ ಉಚಿತ ಸಾರಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಬೆಂಗಳೂರಿನಿಂದ 30 ನಿಮಿಷಕ್ಕೆ ಒಂದು ವಿಶೇಷ ಬಸ್ ಸಂಚರಿಸಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚಿಕಿತ್ಸೆಗಾಗಿ ಅಮೆರಿಕಗೆ ಹೊರಡುವ ಮುನ್ನ ಶಿವಣ್ಣರನ್ನು ನೋಡಲು ಬಂದ ಪೂರ್ಣಿಮಾ ಕುಟುಂಬ
ಸಮ್ಮೇಳನಾಧ್ಯಕ್ಷರಾದ ಗೊ.ರು ಚನ್ನಬಸಪ್ಪ ಅವರು ಗುರುವಾರ ಸಂಜೆ ಮಂಡ್ಯಕ್ಕೆ ಆಗಮಿಸಲಿದ್ದು ಅವರನ್ನು ಬರಮಾಡಿಕೊಳ್ಳಲಾಗುವುದು. ಡಿ.20ರ ಶುಕ್ರವಾರ ಬೆಳಗ್ಗೆ 6ಕ್ಕೆ ಧ್ವಜಾರೋಹಣ ನೆರವೇರಲಿದೆ. 7 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ಹಗಲುವೇಷ, ಮಹಿಳಾ ವೀರಗಾಸೆ, ಗೊರವರ ಕುಣಿತ, ಕಂಸಾಳೆ, ಕರಗ, ಸುಗ್ಗಿ ಕುಣಿತ, ಕೋಲಾಟ ಒಳಗೊಂಡಂತೆ ಪೂರ್ಣಕುಂಭ ಹೊತ್ತ 300 ಮಹಿಳೆಯರು ಹಾಗೂ 50ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಮೆರವಣಿಗೆಗೆ ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಲಿದ್ದಾರೆ ಎಂದರು.
ಕಾರ್ಯಕ್ರಮಗಳಿಗೆ ಮೂರು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. ಪ್ರಧಾನ ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷರ ಜೊತೆಗಿನ ಸಂವಾದವೂ ಸೇರಿದಂತೆ 11 ಗೋಷ್ಠಿಗಳು, 2 ಸಮಾನಾಂತರ ವೇದಿಕೆಗಳಲ್ಲಿ 20 ಗೋಷ್ಠಿಗಳು ಆಯೋಜನೆಗೊಂಡಿವೆ. ಸಮ್ಮೇಳನದ ಅಂಗವಾಗಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಟ್ವಿಸ್ಟ್ – ದೂರು ಹಿಂಪಡೆಯಲು ಸ್ನೇಹಮಯಿ ಕೃಷ್ಣಗೆ ಆಮಿಷ ಆರೋಪ
ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರ, ಅಂಬೇಡ್ಕರ್ ಭವನ, ಸಮಾನಾಂತರ ವೇದಿಕೆ ಮತ್ತು ಪ್ರಧಾನ ವೇದಿಕೆಗಳಲ್ಲಿ ಸ್ಥಳೀಯ ಕಲಾವಿದರ ಕಾರ್ಯಕ್ರಮಗಳು ನಡೆಯಲಿವೆ. ʻನುಡಿ ಜಾತ್ರೆಯ ಸ್ವರ ಯಾತ್ರೆʼ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ.20ರ ಮೊದಲ ದಿನ ಸಾಧುಕೋಕಿಲ (Sadhu kokila) ಮತ್ತು ರಾಜೇಶ್ ಕೃಷ್ಣನ್ (Rajesh Krishnan) ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಡಿ.21ರಂದು ಅರ್ಜುನ್ ಜನ್ಯ (Arjun Janya) ಮತ್ತು ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಡಿ.22ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಪೊಲೀಸ್ ಬ್ಯಾಂಡ್ ಇರಲಿದೆ ಎಂದು ವಿವರಿಸಿದರು.
ಚೆಸ್ಕಾಂ ವತಿಯಿಂದ ನಗರದಲ್ಲಿ ವಿದ್ಯುತ್ ಅಲಂಕಾರ ಮಾಡಲಾಗುತ್ತಿದೆ. ನಾಡುನುಡಿಗೆ ಸೇವೆ ಸಲ್ಲಿಸಿದ 170 ಮಂದಿ ಸಾಧಕರನ್ನು ಸನ್ಮಾನಿಸಲಾಗುತ್ತಿದೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣಾರ್ಥ 87 ಪುಸ್ತಕಗಳನ್ನು ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ʻಬೆಲ್ಲದಾರತಿʼ ಹೆಸರಿನ ಸ್ಮರಣ ಸಂಚಿಕೆ ಕೂಡ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ – ಆರ್. ಅಶೋಕ್