ಚಿಕ್ಕಬಳ್ಳಾಪುರ: ಮಂಡ್ಯ ಲೋಕಸಭಾ ಉಪಚುನಾವಣೆಯ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಲ್.ಆರ್ ಶಿವರಾಮೇಗೌಡ ಅವರು ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲೆಯ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
2016ರಲ್ಲಿ ದಾಖಲಾದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಲ್.ಆರ್ ಶಿವರಾಮೇಗೌಡ ಹಾಗೂ ಅವರ ಪತ್ನಿ ಸುಧಾ ಶಿವರಾಮೇಗೌಡ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಚಿಕ್ಕಬಳ್ಳಾಪುರ ಪ್ರವೀಣ್ ಎಂಬಾತ ಶಿವರಾಮೇಗೌಡ ಅವರ ಪತ್ನಿ ಮಾಲೀಕರಾಗಿರುವ ರಾಯಲ್ ಕಾನ್ ಕೋರ್ಡ್ ಎಜುಕೇಷನ್ ಟ್ರಸ್ಟ್ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರವೀಣ್ ಅವರಿಗೆ ನೀಡಿದ್ದ ಚೆಕ್ ಬೌನ್ಸ್ ಆದ ಕಾರಣ ಅವರು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಆದರೆ ಇದುವರೆಗೂ ವಿಚಾರಣೆಗೆ ಹಾಜರಾಗದ ಶಿವರಾಮೇಗೌಡ ಅವರು ಬಂಧನದ ಭೀತಿಯಿಂದ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು.
Advertisement
Advertisement
ನ.27 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಈ ಹಿಂದೆ ನ್ಯಾಯಾಧೀಶರು ವಿಚಾರಣೆ ವೇಳೆ ಶಿವರಾಮೇಗೌಡ ಅವರಿಗೆ ಸೂಚನೆ ನೀಡಿದ್ದರು. ಆದರೆ ಅವಧಿಗೂ ಮುನ್ನವೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಅವರು ನ್ಯಾಯಾಧೀಶರ ಮುಂದೆ ಹಾಜರಾಗಿ ಬಾಂಡ್ ಹಾಗೂ ಶ್ಯೂರಿಟಿ ನೀಡಿ ವಾಪಾಸ್ಸಾಗಿದ್ದಾರೆ. ಈ ಹಿಂದೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಅವರ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿತ್ತು. ಬಂಧನದ ಭೀತಿ ಎದುರಿಸುತ್ತಿರುವ ಅವರು ನ್ಯಾಯಾಲಯಕ್ಕೆ ಹಾಜರಾಗಿ ಸಮಜಾಯಿಷಿ ನೀಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
Advertisement