ನವದೆಹಲಿ: ಮಾಜಿ ಸಿಎಂ, ಮಂಡ್ಯ ಸಂಸದ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸಂಪುಟದಲ್ಲಿ ಸೇರುವುದು ಖಚಿತವಾಗಿದೆ.
ಕುಮಾರಸ್ವಾಮಿ ಅವರು ಇಂದು ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ (Bengaluru Rural) ಕ್ಷೇತ್ರದ ಬಿಜೆಪಿ ಸಂಸದ ಡಾ.ಮಂಜುನಾಥ್ (Dr Manjunath) ಸುಳಿವು ನೀಡಿದ್ದಾರೆ.
Advertisement
ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರುಮ ಕುಮಾರಸ್ವಾಮಿಯವರು ಸಚಿವರಾಗುತ್ತಿರುವುದು ಖುಷಿ ತಂದಿದೆ. ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೋದಿ ಸಂಪುಟದಲ್ಲಿ ಟಿಡಿಪಿಗೆ 3, ಜೆಡಿಯುಗೆ 2 ಸಚಿವ ಸ್ಥಾನ? – NDA ಕೂಟದ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
Advertisement
Advertisement
ಇಂದು ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ (Narendra Modi) ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಶಕೆ ಮತ್ತೆ ದೇಶದಲ್ಲಿ ಆರಂಭವಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಓದಿದ ಸೋಫಿಯಾ ಈಗ ಒಡಿಶಾದಲ್ಲಿ ಶಾಸಕಿ!
Advertisement
ಮೋದಿ ಪ್ರಮಾಣ ಬೆನ್ನಲ್ಲೇ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಒಟ್ಟು ಎರಡು ಹಂತಗಳಲ್ಲಿ ಸಂಪುಟ ರಚನೆಯಾಗುವ ಸಾಧ್ಯತೆಯಿದ್ದು ಪ್ರಮಾಣವಚನ ಸಮಾರಂಭಕ್ಕಾಗಿ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿವೆ. ಪೂರ್ಣ ಪ್ರಮಾಣದ ಮಂತ್ರಿಮಂಡಲದ ಬಲವು 78 ಮತ್ತು 81 ರ ನಡುವೆ ಇರಬಹುದೆಂದು ನಿರೀಕ್ಷಿಸಲಾಗಿದೆ.
ಗೃಹ, ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳಂತಹ ಮಹತ್ವದ ಖಾತೆಗಳನ್ನು ಬಿಜೆಪಿ ಇಟ್ಟುಕೊಳ್ಳಲಿದ್ದು ಉಕ್ಕು, ನಾಗರಿಕ ವಿಮಾನಯಾನ ಮತ್ತು ಕಲ್ಲಿದ್ದಲು ಮುಂತಾದ ಖಾತೆಗಳು ಮಿತ್ರ ಪಕ್ಷಗಳಿಗೆ ಸಿಗುವ ಸಾಧ್ಯತೆಯಿದೆ. ಇಂದು ಬೆಳಗ್ಗೆಯಿಂದ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರಿಗೆ ಸರ್ಕಾರದಿಂದ ಕರೆಗಳು ಬರುವ ನಿರೀಕ್ಷೆಯಿದೆ.