ಮಂಡ್ಯ: ಲೋಕ ರಾಜಕೀಯಕ್ಕೆ ಮೆಗಾ ಟ್ವಿಸ್ಟ್ ಸಿಕ್ಕಿದ್ದು, ಸಕ್ಕರೆ ನಾಡಿನಲ್ಲಿ ರಾಜಕೀಯ ಸಮೀಕರಣ ಬದಲಾಗುತ್ತಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಮೂಡಿದೆ.
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ ಎಂದು ಹೇಳಿದ್ದರು. ಆದ್ರೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡಿ ಬಳಿಕ ಸಮಾವೇಶದಲ್ಲಿ ಆಡಿದ ಮಾತು ಇದೀಗ ಬೇರೆಯದ್ದೇ ಸುಳಿವು ನೀಡುತ್ತಿದೆ.
Advertisement
ಸುಮಲತಾಗೆ ಬೆಂಬಲ ನೀಡುವುದಾಗಿ ಪ್ರಧಾನಿಯವರು ಬಹಿರಂಗ ಹೇಳಿದ್ದರ ಪರಿಣಾಮದಿಂದಾಗಿ ಸಕ್ಕರೆ ನಾಡಿನ ರಾಜಕೀಯ ಸಮೀಕರಣ ಬದಲಾಗುತ್ತಾ ಅನ್ನೋ ಅನುಮಾನ ರಾಜಕೀಯ ವಲಯದಲ್ಲಿ ಮೂಡಿದೆ. ಒಂದು ವೇಳೆ ಚುನಾವಣೆಯಲ್ಲಿ ಸುಮಲತಾ ಗೆದ್ರೆ ಬಿಜೆಪಿಗೆ ಹೋಗಬಹುದು ಎಂಬ ಭೀತಿಯಿಂದ ಸುಮಲತಾಗೆ ವೋಟ್ ಹಾಕಬೇಕು ಅಂದುಕೊಂಡವರು ಉಲ್ಟಾ ಹೊಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.
Advertisement
ಬಿಜೆಪಿ ವಿರೋಧಿಗಳು ಹಾಗೂ ಮುಸ್ಲಿಮರು ಸುಮಲತಾರಿಂದ ಸಂಪೂರ್ಣವಾಗಿ ದೂರ ಉಳಿಯುವ ಸಾಧ್ಯತೆಗಳಿವೆ. ಈ ಮೂಲಕ ಮೋದಿ ಕೈಯಾರೆ ಸುಮಲತಾ ಗೆಲುವನ್ನು ತಪ್ಪಿಸುತ್ತಿದ್ದಾರಾ ಎಂಬ ಪ್ರಶ್ನೆಯೂ ಮೂಡಿದ್ದು, ಮೋದಿ ಹಾಗೂ ಬಿಜೆಪಿ ವಿರೋಧಿ ಮತಗಳು ನಿಖಿಲ್‍ಗೆ ಬೀಳುವ ಲಕ್ಷಣಗಳು ಕಂಡುಬರುತ್ತಿದೆ. ಒಟ್ಟಿನಲ್ಲಿ ಮತದಾನಕ್ಕೆ ಇನ್ನೇನು 8 ದಿನ ಬಾಕಿ ಇರುವಾಗಲೇ ಮಂಡ್ಯ ಪಾಲಿಟಿಕ್ಸ್ ಮೆಗಾ ಟ್ವಿಸ್ಟ್ ಪಡೆದುಕೊಂಡಿದೆ.
Advertisement
Advertisement
ಮೋದಿ ಹೇಳಿದ್ದೇನು?
ಚಿತ್ರದುರ್ಗದ ನಂತರ ಮೈಸೂರಿಗೆ ಭೇಟಿ ನೀಡಿದ ಪ್ರಧಾನಿಯವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ, ಅಂಬರೀಶ್ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಮಾಜಿ ಸಚಿವ, ನಟ ಅಂಬರೀಶ್ ಕನ್ನಡ ನಾಡಿನ ಜನರ ಹೃದಯದಲ್ಲಿದ್ದಾರೆ. ಅಂಬರೀಶ್ ಅವರು ಸುಮಲತಾ ಜೊತೆ ಸೇರಿಕೊಂಡು ಈ ಸಂಸ್ಕೃತಿ ಸೇವೆ ಮಾಡಿದ್ದಾರೆ. ಹೀಗಾಗಿ ಅವರಿಗೆ ಆಶೀರ್ವಾದ ಮಾಡಿ ನನಗೆ ಶಕ್ತಿ ತುಂಬಿ ಎಂದು ಹೇಳಿದ್ದರು.
ಸುಮಲತಾ ಹೇಳಿದ್ದೇನು?
ಮೋದಿ ಮಾತಿಗೆ ಪ್ರತಿಕ್ರಿಯಿಸಿದ್ದ ಸುಮಲತಾ, ಪ್ರಧಾನಿ ಮೋದಿ ಅವರು ಅಂಬರೀಶ್ ಅವರನ್ನ ನೆನಪು ಮಾಡಿಕೊಂಡಿದ್ದಕ್ಕೆ ಹೃದಯಪೂರ್ವಕ ಧನ್ಯವಾದಗಳು. ನನಗೆ ಹೇಳಲು ಪದಗಳೇ ಬರುತ್ತಿಲ್ಲ. ಮೋದಿ ಅವರಿಗೆ “ಹಾರ್ಟ್ ಫೆಲ್ಟ್ ಥ್ಯಾಂಕ್ಸ್”. ಇದು ಹೆಮ್ಮೆ ಪಡುವಂತ ವಿಚಾರ. ಇದಕ್ಕೆ ಕಾರಣ ಅಂಬರೀಶ್ ಅವರ ಸಾಧನೆ. ಮೋದಿ ಈ ಮಾತಿನಿಂದ ನಮ್ಮ ಕಾರ್ಯಕರ್ತರಲ್ಲಿ ಇನ್ನಷ್ಟು ಸ್ಫೂರ್ತಿ ಬರುತ್ತದೆ ಎಂದು ಅಭಿನಂದಿಸಿದ್ದರು.